ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

19ರಂದು ವಿಧಾನಸೌಧಕ್ಕೆ ಮುತ್ತಿಗೆ

Last Updated 9 ನವೆಂಬರ್ 2018, 20:19 IST
ಅಕ್ಷರ ಗಾತ್ರ

ಬೆಂಗಳೂರು: ’ರೈತರಸಂಪೂರ್ಣ ಸಾಲಮನ್ನಾ ಮಾಡುವುದಾಗಿ ಹೇಳಿದ್ದಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಯವರು ಮಾತು ತಪ್ಪಿದ್ದು, ಅವರ ಈ ಧೋರಣೆಯನ್ನು ಖಂಡಿಸಿ ನ.19ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು’ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಚಾಮರಸ ಮಾಲೀಪಾಟೀಲ ಹೇಳಿದರು.

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರತಿಭಟನೆಯಲ್ಲಿ ಎಲ್ಲ ಜಿಲ್ಲೆಗಳ ರೈತರು ಭಾಗವಹಿಸಲಿದ್ದಾರೆ’ ಎಂದು ಹೇಳಿದರು.ರಾಜ್ಯದಲ್ಲಿ ತೀವ್ರ ಬರಗಾಲವಿದೆ. ಕೊಡಗು ಅತಿವೃಷ್ಟಿಯಿಂದ ನಲುಗಿದೆ. ಈ ಸಮಸ್ಯೆಗಳಿಗೆ ಪರಿಹಾರ ರೂಪಿಸುವತ್ತ ಸರ್ಕಾರ ಕಾಳಜಿ ತೋರುತ್ತಿಲ್ಲ ಎಂದು ದೂರಿದರು.

ಎಂ.ಎಸ್‌ ಸ್ವಾಮಿನಾಥನ್‌ ವರದಿ ಅನುಷ್ಠಾನಕ್ಕೆ ಆಗ್ರಹಿಸಿ ಸ್ವರಾಜ್‌ ಇಂಡಿಯಾ ಮುಖ್ಯಸ್ಥ ಯೋಗೇಂದ್ರ ಯಾದವ್‌ ನೇತೃತ್ವದಲ್ಲಿನ.30ರಂದು ದೆಹಲಿಯಲ್ಲಿ ರ‍್ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಸಂಘದ ಪ್ರಧಾನಕಾರ್ಯದರ್ಶಿ ಬಡಗಲಪುರ ನಾಗೇಂದ್ರ ಮಾತನಾಡಿ, ಗಣಿಗಾರಿಕೆಯಿಂದ ಕನ್ನಂಬಾಡಿ ಅಣೆಕಟ್ಟೆಗೆ ಅಪಾಯವಿದೆ. ಅಣೆಕಟ್ಟೆಯ ಸುತ್ತ ನಡೆಯುತ್ತಿರುವ ಗಣಿಗಾರಿಕೆಯನ್ನು ಶಾಶ್ವತವಾಗಿ ನಿಷೇಧಿಸಬೇಕು ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT