ಸೈನಿಕ ಸ್ಮಾರಕ: ಶೀಘ್ರ ವೀರಗಲ್ಲು ಸಾಗಣೆ

ಮಂಗಳವಾರ, ಜೂನ್ 25, 2019
22 °C

ಸೈನಿಕ ಸ್ಮಾರಕ: ಶೀಘ್ರ ವೀರಗಲ್ಲು ಸಾಗಣೆ

Published:
Updated:

ಬೆಂಗಳೂರು: ನಗರದ ರಾಷ್ಟ್ರೀಯ ಸೈನಿಕ ಸ್ಮಾರಕ ಪ್ರದೇಶದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ವೀರಗಲ್ಲನ್ನು ರವಾನಿಸುವಾಗ ಸಾರ್ವಜನಿಕರಿಗೆ ತೊಂದರೆಯಾಗದಂತೆ ಸುರಕ್ಷಿತ ಕ್ರಮಗಳನ್ನು ತೆಗೆದುಕೊಳ್ಳುವ ಬಗ್ಗೆ ಬಿಡಿಎ ಅಧಿಕಾರಿಗಳು ಸಭೆ ನಡೆಸಿದರು. 

ಯುದ್ಧದಲ್ಲಿ ಹುತಾತ್ಮರಾದ ಸೈನಿಕರ ಸ್ಮರಣಾರ್ಥ ಸುಮಾರು 450 ಟನ್‌ ತೂಕದ ವೀರಗಲ್ಲನ್ನು ಸ್ಥಾಪಿಸಲಾಗುತ್ತಿದೆ. 75 ಅಡಿ ಉದ್ದದ ಏಕಶಿಲಾ ಸ್ಮಾರಕವನ್ನು ದೇವನಹಳ್ಳಿಯ ಗಣಿ ಪ್ರದೇಶದಿಂದ ಬಳ್ಳಾರಿ ರಸ್ತೆ ಮೂಲಕ ಸ್ಮಾರಕ ಪ್ರದೇಶಕ್ಕೆ ಸಾಗಿಸಲಾಗುತ್ತದೆ.‌‌ ಪೊಲೀಸ್ ಅಧಿಕಾರಿಗಳು, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ, ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯ ಮತ್ತು ಪ್ರಾಧಿಕಾರದ ಹಿರಿಯ ಅಧಿಕಾರಿಗಳು ಸಭೆಯಲ್ಲಿದ್ದರು. 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !