ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ರಾಹ್ಮಣ ಮಂಡಳಿ ಸ್ಥಾಪಿಸಿದ ಸರ್ಕಾರ

Last Updated 20 ಫೆಬ್ರುವರಿ 2019, 19:58 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮಾಜದವರಿಗೆ ಶಿಕ್ಷಣ, ಕೌಶಲ ಅಭಿವೃದ್ಧಿ, ಸ್ವಯಂ ಉದ್ಯೋಗ, ಕಲ್ಯಾಣ ಹಾಗೂ ಮೂಲಸೌಕರ್ಯಗಳನ್ನು ಒಳಗೊಂಡಂತೆ ಯೋಜನೆಗಳನ್ನು ಜಾರಿಗೆ ತರುವ ಉದ್ದೇಶದಿಂದ ‘ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ’ ಸ್ಥಾಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ (ವಿಪತ್ತು ನಿರ್ವಹಣೆ) ಗಂಗಾರಾಮ್ ಬಡೇರಿಯಾ, ಕಂದಾಯ ಇಲಾಖೆಯ ಜಂಟಿ ಕಾರ್ಯದರ್ಶಿ (ಭೂಮಿ) ಕೆ.ಭಾನುಮತಿ, ಧಾರ್ಮಿಕ ಮತ್ತು ದತ್ತಿ ಇಲಾಖೆಯ ಆಯುಕ್ತೆ ಸಿ.ಪಿ.ಶೈಲಜಾ, ಧಾರ್ಮಿಕ ದತ್ತಿ ಇಲಾಖೆಯ ಕೇಂದ್ರ ಸ್ಥಾನಿಕ ಸಹಾಯಕ ಬಿ.ವಿ.ಶ್ರೀಧರ್‌ ಮಂಡಳಿಯ ನಿರ್ದೇಶಕರು,ನಾಮನಿರ್ದೇಶಿತ ಷೇರುದಾರರು ಆಗಿರುತ್ತಾರೆ.

ಮಂಡಳಿಯನ್ನು ದಿ ಕಂಪನೀಸ್‌ ಆ್ಯಕ್ಟ್‌ 2013ರ ಕಲಂ 8ರ ಅಡಿ ನೋಂದಣಿ ಮಾಡಲಾಗುತ್ತದೆ. ಕಚೇರಿ ಧಾರ್ಮಿಕ ಮತ್ತು ದತ್ತಿ ಇಲಾಖೆಯ ಆಯುಕ್ತರ ಕಚೇರಿಯಲ್ಲಿ ಇರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT