ಕುಡಿಯುವ ನೀರಿಗೆ ವಿದ್ಯಾರ್ಥಿಗಳ ಪರದಾಟ

7

ಕುಡಿಯುವ ನೀರಿಗೆ ವಿದ್ಯಾರ್ಥಿಗಳ ಪರದಾಟ

Published:
Updated:
Deccan Herald

ಬೆಂಗಳೂರು: ಹೆಸರಘಟ್ಟ ಹೋಬಳಿ ಹನಿಯೂರು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕುಡಿಯುವ ನೀರಿನ ಸೌಲಭ್ಯವಿಲ್ಲದೇ ವಿದ್ಯಾರ್ಥಿಗಳು ಪರದಾಡುವಂತೆ ಆಗಿದೆ.

1951ರಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆರಂಭವಾಗಿದೆ. 70ರ ದಶಕದಲ್ಲಿ ಸುಮಾರು 60–70 ಮಕ್ಕಳು ದಾಖಲಾಗಿದ್ದರು. ಇತ್ತೀಚೆಗೆ ವಿದ್ಯಾರ್ಥಿಗಳ ಸಂಖ್ಯೆ ಕ್ಷೀಣಿಸಿದೆ. ಶಾಲೆಯಲ್ಲಿ ಸೌಲಭ್ಯ ಇಲ್ಲದಿರುವುದೇ ಇದಕ್ಕೆ ಕಾರಣವಾಗಿದೆ. ಸದ್ಯ 35 ಮಕ್ಕಳು ಓದುತ್ತಿದ್ದಾರೆ.

ಸೊಣೇನಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ದಿನಕ್ಕೆ ಒಂದು ಕ್ಯಾನ್ ನೀರನ್ನು ಶಾಲೆಗೆ ಒದಗಿಸಲಾಗುತ್ತಿದೆ. ಆದರೆ ಈ ನೀರು ಸಾಕಾಗದೆ ವಿದ್ಯಾರ್ಥಿಗಳು ಮನೆಯಿಂದ ನೀರನ್ನು ತಂದುಕೊಳ್ಳುವ ಪರಿಸ್ಥಿತಿ ಇದೆ. ಶಾಲೆಯ ಹಳೆಯ ಕಟ್ಟಡದಲ್ಲಿ ಶೌಚಾಲಯ ಇದೆ. ಇದು ಗಬ್ಬೆದ್ದು ನಾರುತ್ತಿದೆ. ಮಕ್ಕಳು ಮೂಗು ಮುಚ್ಚಿಕೊಂಡು ಹೋಗುವ ಸ್ಥಿತಿ ಇದೆ. ಗಂಡು ಮಕ್ಕಳು ಬಯಲಿನಲ್ಲಿಯೇ ಮೂತ್ರ ವಿಸರ್ಜನೆ ಮಾಡುತ್ತಿದ್ದಾರೆ.

‘ಪ್ಲಾಸ್ಟಿಕ್ ಬಾಟಲಿಯಲ್ಲಿ ನೀರು ಕುಡಿಯುವುದರಿಂದ ಮಕ್ಕಳಿಗೆ ತೊಂದರೆಯಾಗುತ್ತದೆ. ಕೆಲವು ಬಾರಿ ಅಲರ್ಜಿಯಾದಾಗ ವೈದ್ಯರು ಕೂಡ ಪ್ಲಾಸ್ಟಿಕ್‌ ಬಾಟಲಿಯಲ್ಲಿ ನೀರು ಕೊಡಬೇಡಿ ಎಂದಿದ್ದಾರೆ. ಶಾಲೆಯಲ್ಲಿ ನೀರಿನ ವ್ಯವಸ್ಥೆ ಇಲ್ಲದಿರುವುದು ಬೇಸರ ತರಿಸಿದೆ’ ಎಂದು ಪೋಷಕರು ಅಸಮಾಧಾನ ವ್ಯಕ್ತಪಡಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !