ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಮನೋಭಾವ ಅಗತ್ಯ

Last Updated 30 ನವೆಂಬರ್ 2018, 19:45 IST
ಅಕ್ಷರ ಗಾತ್ರ

ಹೊಸಕೋಟೆ: ವಿದ್ಯಾರ್ಥಿಗಳು ವಿಜ್ಞಾನದಲ್ಲಿ ಆಸಕ್ತಿ ವಹಿಸಿ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ನಿವೃತ್ತ ಮುಖ್ಯ ಶಿಕ್ಷಕ ವೆಂಕಟೇಶ್ ಹೇಳಿದರು.

ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್, ಶಿಕ್ಷಣ ಇಲಾಖೆ ಆಶ್ರಯದಲ್ಲಿ ಪಟ್ಟಣದ ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಜಿಲ್ಲಾಮಟ್ಟದ 26ನೇ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಅವರು ಮಾತನಾಡಿದರು.

‘ಜ್ಞಾನ ವಿಕಾಸಕ್ಕೆ ವಿದ್ಯಾರ್ಥಿಗಳು ಪ್ರಶ್ನಿಸುವುದನ್ನು ಮೊದಲು ಕಲಿಯಬೇಕು’ ಎಂದು ಹೇಳಿದರು.

ವಿಜ್ಞಾನ ಪರಿಷತ್‌ನ ಜಿಲ್ಲಾ ಗೌರವ ಕಾರ್ಯದರ್ಶಿ ಕೆ.ವಿ.ಶ್ರೀಕಾಂತ್,ಡಾ.ಸಿದ್ದುಕುಮಾರ್ ಇದ್ದರು. ವಿವೇಕಾನಂದ ಶಾಲೆ ಅಧ್ಯಕ್ಷ ನಾಗರಾಜ ಗುಪ್ತ ಸಮಾವೇಶಕ್ಕೆ ಚಾಲನೆ ನೀಡಿದರು.

‘ಸ್ವಚ್ಛ ಹಸಿರು ಮತ್ತು ಆರೋಗ್ಯವಂತ ರಾಷ್ಟ್ರಕ್ಕಾಗಿ ವಿಜ್ಞಾನ ತಂತ್ರಜ್ಞಾನ ಮತ್ತು ಅವಿಷ್ಕಾರಗಳು ’ವಿಷಯದ ಮಂಡನೆ ಸ್ಪರ್ಧೆಯಲ್ಲಿ ಜಿಲ್ಲೆಯ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ 20 ತಂಡ ಭಾಗವಹಿಸಿದ್ದು ಆಯ್ಕೆಯಾದ 10 ತಂಡಗಳು ಕಲುಬುರ್ಗಿಯಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT