ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಪಿಎಸ್‌ಸಿ ಎದುರು ಅಭ್ಯರ್ಥಿಗಳ ಪ್ರತಿಭಟನೆ

ನೇತೃತ್ವ ವಹಿಸಿದ್ದ ಶಾಸಕ ಎಸ್. ಸುರೇಶ್‌ ಕುಮಾರ್‌
Last Updated 12 ಜೂನ್ 2019, 19:38 IST
ಅಕ್ಷರ ಗಾತ್ರ

ಬೆಂಗಳೂರು: 2015ನೇ ಸಾಲಿನ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ನೇಮಕಾತಿಯ ಸಂದರ್ಶನ (ವ್ಯಕ್ತಿತ್ವ ಪರೀಕ್ಷೆ) ಪ್ರಕ್ರಿಯೆ ಆರಂಭಿಸುವಂತೆ ಆಗ್ರಹಿಸಿ ಕೆಪಿಎಸ್‌ಸಿ ಕಚೇರಿ ಎದುರು ಶಾಸಕ ಎಸ್. ಸುರೇಶ್‌ಕುಮಾರ್ ನೇತೃತ್ವದಲ್ಲಿ ಅಭ್ಯರ್ಥಿಗಳು ಬುಧವಾರ ಪ್ರತಿಭಟನೆ ನಡೆಸಿದರು.

ಕೆಪಿಎಸ್‌ಸಿ ವಿರುದ್ಧ ಘೋಷಣೆ ಕೂಗಿದ ಅಭ್ಯರ್ಥಿಗಳು, ಕೂಡಲೇ ಸಂದರ್ಶನದ ದಿನಾಂಕ ನಿಗದಿ ಮಾಡಬೇಕು ಎಂದು ಒತ್ತಾಯಿಸಿದರು.

2015ನೇ ಸಾಲಿನ ನೇಮಕಾತಿಗಾಗಿ 2017ರ ಮೇ 12ರಂದು ಕೆಪಿಎಸ್‌ಸಿ ಅಧಿಸೂಚನೆ ಹೊರಡಿಸಿತ್ತು.

ಅದೇ ವರ್ಷ ಆಗಸ್ಟ್ 18ರಂದು ಪೂರ್ವಭಾವಿ ಪರೀಕ್ಷೆ, ಡಿ. 22ರಂದು ಮುಖ್ಯ ಪರೀಕ್ಷೆ ನಡೆಸಿದೆ. 2019ರ ಜ. 28ರಂದು ಮುಖ್ಯ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಆದರೆ, ನಂತರದ ಪ್ರಕ್ರಿಯೆ ನಡೆದಿಲ್ಲ ಎಂದು ಸುರೇಶ್‌ಕುಮಾರ್ ಹೇಳಿದರು.

‌‌ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರು ಮತ್ತು ಅಲ್ಲಿನ ಅಧಿಕಾರಿಗಳ ನಡುವೆ ಸಮನ್ವಯ ಇಲ್ಲದಿರುವುದು ಈ ವಿಳಂಬಕ್ಕೆ ಕಾರಣವಾಗಿದೆ. ಇಬ್ಬರ ನಡುವಿನ ಜಟಾಪಟಿಯಲ್ಲಿ ಅಭ್ಯರ್ಥಿಗಳು ಅನ್ಯಾಯಕ್ಕೆ ಒಳಗಾಗುತ್ತಿದ್ದಾರೆ ಎಂದು ದೂರಿದರು.

ಕೆಪಿಎಸ್‌ಸಿ ಕಾರ್ಯದರ್ಶಿಯೇ ಸ್ಥಳಕ್ಕೆ ಬಂದು ಸಂದರ್ಶದ ವೇಳಾಪಟ್ಟಿ ಪ್ರಕಟಿಸಬೇಕು. ಅಲ್ಲಿಯವರೆಗೂ ಸ್ಥಳದಲ್ಲೇ ಕೂರುವುದಾಗಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT