ಬುಧವಾರ, ಸೆಪ್ಟೆಂಬರ್ 29, 2021
20 °C

ನೇಣು ಹಾಕಿಕೊಂಡು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಮಮೂರ್ತಿನಗರ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ಲೀನಾ (17) ಎಂಬಾಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. 

‘ಗುತ್ತಿಗೆದಾರ ಶ್ರೀನಿವಾಸಮೂರ್ತಿ ಎಂಬುವರ ಪುತ್ರಿ ಲೀನಾ, ಖಾಸಗಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ. ಮಂಗಳವಾರ ಮಧ್ಯಾಹ್ನ ಕೊಠಡಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸ್ನೇಹಿತೆಯರು ಮನೆಗೆ ಬಂದಾಗಲೇ ವಿಷಯ ಗೊತ್ತಾಗಿದೆ. ಕೊಠಡಿಯಲ್ಲಿ ಮರಣ ಪತ್ರ ಸಿಕ್ಕಿದೆ’ ಎಂದು ರಾಮಮೂರ್ತಿನಗರ ಪೊಲೀಸರು ಹೇಳಿದರು.

‘ಬಾಲ್ಯದ ಗೆಳೆಯ ಮಂಜುನಾಥ್ ಎಂಬಾತ ಮಗಳಿಗೆ ಕಿರುಕುಳ ನೀಡುತ್ತಿದ್ದ. ಪ್ರೀತಿಸುವಂತೆ ದುಂಬಾಲು ಬಿದ್ದಿದ್ದ. ಆತನಿಂದಾಗಿ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ’ ಎಂಬುದಾಗಿ ಆರೋಪಿಸಿ ಲೀನಾಳಪೋಷಕರು ದೂರು ನೀಡಿದ್ದಾರೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಮಂಜುನಾಥ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ತಿಳಿಸಿದರು.  

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು