ಗಂಡ ಆತ್ಮಹತ್ಯೆ; ಹೆಂಡತಿ ವಿರುದ್ಧ ಎಫ್‌ಐಆರ್

ಮಂಗಳವಾರ, ಜೂನ್ 25, 2019
28 °C

ಗಂಡ ಆತ್ಮಹತ್ಯೆ; ಹೆಂಡತಿ ವಿರುದ್ಧ ಎಫ್‌ಐಆರ್

Published:
Updated:

ಬೆಂಗಳೂರು: ‘ನನ್ನ ಸಾವಿಗೆ ಹೆಂಡತಿ ಮತ್ತು ಅವರ ಮನೆಯವರೇ ಕಾರಣ’ ಎಂದು ಪತ್ರ ಬರೆದಿಟ್ಟು ಎಸ್.ಶ್ರೀನಿವಾಸ್ (34) ಎಂಬ ಕಾರು ಚಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬಾಗಲಗುಂಟೆ ಸಮೀಪದ ಮಂಜುನಾಥನಗರ 1ನೇ ಮುಖ್ಯರಸ್ತೆ ನಿವಾಸಿಯಾದ ಅವರು, ಮೇ 17 ರಿಂದ 19ರ ನಡುವೆ ಮನೆಯಲ್ಲೇ ನೇಣು ಹಾಕಿಕೊಂಡಿದ್ದಾರೆ. ದೇವಸ್ಥಾನಕ್ಕೆ ಹೋಗಿದ್ದ ಕುಟುಂಬ ಸದಸ್ಯರು, ಭಾನುವಾರ ರಾತ್ರಿ ಮನೆಗೆ ಮರಳಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಶ್ರೀನಿವಾಸ್ ಅಣ್ಣ ರವೀಶ್ವರ್ ಕೊಟ್ಟಿರುವ ದೂರು ಹಾಗೂ ಮರಣ ಪತ್ರ ಆಧರಿಸಿ ಮೃತರ ಪತ್ನಿ ಸುಮಾ, ಆಕೆಯ ತಂದೆ ಗಂಗಣ್ಣ, ತಾಯಿ ಶಾರದಾ ಹಾಗೂ ಅಣ್ಣ ಸುನೀಲ್ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ (ಐಪಿಸಿ 306) ಆರೋಪದಡಿ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ಬಾಗಲಗುಂಟೆ ಪೊಲೀಸರು ಹೇಳಿದರು.  

‘ನನ್ನ ಕಾರನ್ನು ಬಾಡಿಗೆ ಓಡಿಸಿಕೊಂಡು ಜೀವನ ನಡೆಸುತ್ತಿದ್ದ ಶ್ರೀನಿವಾಸ್, ಒಂದೂವರೆ ವರ್ಷದ ಹಿಂದೆ ಸುಮಾ ಎಂಬಾಕೆಯನ್ನು ವಿವಾಹವಾದ. ಮದುವೆ ನಂತರ ಸುಮಾ ಹಾಗೂ ಆಕೆಯ ಕುಟುಂಬ ಸದಸ್ಯರು ಆತನಿಗೆ ನಿತ್ಯ ಕಿರುಕುಳ ನೀಡುತ್ತಿದ್ದರು. ಕೆಲಸ ಮುಗಿಸಿ ಮನೆಗೆ ಹೋಗುವುದು ತಡವಾದರೆ ಬಾಯಿಗೆ ಬಂದಂತೆ ಬೈಯ್ಯುತ್ತಿದ್ದರು. ಅವರ ವರ್ತನೆಯಿಂದ ಸೋದರ ತುಂಬ ಬೇಸರಗೊಂಡಿದ್ದ’ ಎಂದು ಶ್ರೀನಿವಾಸ್ ಅಣ್ಣ ರವೀಶ್ವರ್ ದೂರಿನಲ್ಲಿ ಹೇಳಿದ್ದಾರೆ.

‘ಒಂದೂವರೆ ತಿಂಗಳ ಹಿಂದೆ ಸುಮಾ ಬೇರೆ ಮನೆ ಮಾಡುವ ನೆಪದಲ್ಲಿ ತನ್ನೊಟ್ಟಿಗೆ ಗಂಡನನ್ನೂ ತವರು ಮನೆಗೆ ಕರೆದುಕೊಂಡು ಹೋಗಿದ್ದಳು. ಅಲ್ಲಿ ಇಡೀ ಕುಟುಂಬವೇ ಆತನಿಗೆ ಚಿತ್ರಹಿಂಸೆ ನೀಡುತ್ತಿತ್ತು. ಇತ್ತೀಚೆಗೆ ಪತ್ನಿಯ ಕುಟುಂಬ ತೊರೆದು ಆತ ಮನೆಗೆ ಮರಳಿದ್ದ. ಮೇ 17ರಂದು ನಾವು ದೇವಸ್ಥಾನಕ್ಕೆ ತೆರಳಿದ ನಂತರ ಶ್ರೀನಿವಾಸ್ ನೇಣಿಗೆ ಶರಣಾಗಿದ್ದಾನೆ. ಹೀಗಾಗಿ, ಈ ಸಾವಿಗೆ ಕಾರಣರಾದ ಸುಮಾ ಹಾಗೂ ಅವರ ಕುಟುಂಬದ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು’ ಎಂದು ಅವರು ಮನವಿ ಮಾಡಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !