ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಂದಾವರ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಆತ್ಮಹತ್ಯೆ

Last Updated 30 ಆಗಸ್ಟ್ 2018, 16:03 IST
ಅಕ್ಷರ ಗಾತ್ರ

ಮಂಗಳೂರು: ನಗರದ ಹೊರವಲಯದ ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಕಂದಾವರ ಗ್ರಾಮ ಪಂಚಾಯಿತಿ ಕಾರ್ಯದರ್ಶಿಯಾಗಿದ್ದ ಮುದುಕಪ್ಪ ವಿಠಲ್ ಮೂರ್ನಾಳ್‌ (46) ತೆಂಕ ಎಕ್ಕಾರ್‌ನ ತಮ್ಮ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬಾಗಲಕೋಟೆ ಜಿಲ್ಲೆಯವರಾದ ಮುದುಕಪ್ಪ ಹಲವು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೇವೆಯಲ್ಲಿದ್ದರು. ಕೆಲವು ವರ್ಷಗಳಿಂದ ಕಂದಾವರ ಗ್ರಾಮ ಪಂಚಾಯಿತಿ ಕಾರ್ಯದರ್ಶಿಯಾಗಿದ್ದರು. ಹತ್ತು ದಿನಗಳ ಹಿಂದೆ ಶೌಚಾಲಯ ಸ್ವಚ್ಛಗೊಳಿಸುವ ರಾಸಾಯನಿಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು.

‘ಮುದುಕಪ್ಪ ಬುಧವಾರ ರಾತ್ರಿ ಊಟದ ನಂತರ ಮಲಗುವ ಕೋಣೆಯಲ್ಲಿ ನೇಣು ಬಿಗಿದುಕೊಂಡಿದ್ದಾರೆ. ಗುರುವಾರ ಬೆಳಿಗ್ಗೆ ಮನೆಯವರಿಗೆ ಗೊತ್ತಾಗಿದೆ. ಅವರು ಖಿನ್ನತೆಯಿಂದ ಬಳಲುತ್ತಿದ್ದರು ಎಂಬುದಾಗಿ ಕುಟುಂಬದವರು ತಿಳಿಸಿದ್ದಾರೆ’ ಎಂದು ಬಜ್ಪೆ ಠಾಣೆ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT