ಮಂಗಳವಾರ, ಫೆಬ್ರವರಿ 25, 2020
19 °C

ಬಗರ್‌ಹುಕುಂ ಜಮೀನು ಅಕ್ರಮ ಮಂಜೂರಾತಿ:ಆರ್‌.ಅಶೋಕ್‌ ವಿರುದ್ಧದ ಎಸಿಬಿ ತನಿಖೆಗೆ ತಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಬಗರ್‌ಹುಕುಂ ಜಮೀನು ಅಕ್ರಮ ಮಂಜೂರಾತಿ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಆರ್. ಅಶೋಕ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ತನಿಖೆಗೆ ಸೂಚಿಸಿ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್‌ ಶುಕ್ರವಾರ ತಡೆ ನೀಡಿದೆ.

ಕಳೆದ ಸೆಪ್ಟೆಂಬರ್‌ 25ರ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಅಶೋಕ ಸಲ್ಲಿಸಿದ್ದ ವಿಶೇಷ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್‌.ಎ.ಬೋಬಡೆ ಹಾಗೂ ಎಲ್‌.ನಾಗೇಶ್ವರರಾವ್‌ ಅವರಿದ್ದ ಪೀಠ, ಈ ಸಂಬಂಧ ಪ್ರತಿಕ್ರಿಯೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿತು.

ಈ ಸಂಬಂಧ 2017ರ ನವೆಂಬರ್‌ನಲ್ಲಿಯೇ ಮೊದಲ ಬಾರಿಗೆ ದೂರು ನೀಡಲಾಗಿದ್ದರೂ ಎಫ್‌ಐಆರ್‌ ದಾಖಲಾಗಿರಲಿಲ್ಲ. ಅರ್ಜಿದಾರರು ಸ್ವಂತ ಉದ್ದೇಶಕ್ಕಾಗಿ ಈ ಜಮೀನನ್ನು ಬಳಕೆ ಮಾಡಿಕೊಳ್ಳಲೆಂದು ಮಂಜೂರು ಮಾಡದಿದ್ದರೂ ರಾಜಕೀಯ ದುರುದ್ದೇಶದಿಂದ ಪ್ರಕರಣ ದಾಖಲಿಸಲಾಗಿದೆ ಎಂದು ಅಶೋಕ ಪರ ವಕೀಲ ಮುಕುಲ್‌ ರೋಹಟ್ಗಿ ನ್ಯಾಯಪೀಠಕ್ಕೆ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು