ಭಾನುವಾರ, ಮೇ 22, 2022
24 °C

ಲೈಂಗಿಕ ದೌರ್ಜನ್ಯ: ‘ಸ್ವಿಗ್ಗಿ’ ಡೆಲಿವರಿ ಬಾಯ್‌ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿಳಾಸ ಕೇಳುವ ನೆಪದಲ್ಲಿ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿ ಮಂಜುನಾಥ್ ಎಂಬಾತನನ್ನು ಎಚ್‌ಎಸ್‌ಆರ್‌ ಲೇಔಟ್ ಪೊಲೀಸರು ಬಂಧಿಸಿದ್ದಾರೆ.

‘ಸ್ಥಳೀಯ ನಿವಾಸಿ ಮಂಜುನಾಥ್, ‘ಸ್ವಿಗ್ಗಿ’ ಆಹಾರ ಸರಬರಾಜು ಕಂಪನಿಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಉತ್ತರ ಪ್ರದೇಶದ 26 ವರ್ಷದ ಯುವತಿ ನೀಡಿದ್ದ ದೂರಿನಡಿ ಆತನನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಏಪ್ರಿಲ್ 28ರಂದು ರಾತ್ರಿ 10ರ ಸುಮಾರಿಗೆ ಹಣ ಡ್ರಾ ಮಾಡಿಕೊಳ್ಳುವುದಕ್ಕಾಗಿ ಯುವತಿ ಎಟಿಎಂ ಘಟಕದತ್ತ ತೆರಳುತ್ತಿದ್ದರು. ರಸ್ತೆಯಲ್ಲಿ ಯುವತಿಯನ್ನು ಮಾತನಾಡಿಸಿದ್ದ ಆರೋಪಿ, ‘ಗ್ರಾಹಕರಿಗೆ ಊಟ ಕೊಡಬೇಕಿದೆ. ಅವರ ವಿಳಾಸ ನಿಮಗೆ ಗೊತ್ತಾ‘ ಎಂದು ಮೊಬೈಲ್‌ನಲ್ಲಿದ್ದ ಸಂದೇಶ ತೋರಿಸಿ ಕೇಳಿದ್ದ.’

‘ಯುವತಿ ಮೊಬೈಲ್‌ ನೋಡುತ್ತಿದ್ದಾಗಲೇ ಅವರ ಅಂಗಾಂಗಗಳನ್ನು ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗಿ ಪರಾರಿಯಾಗಿದ್ದ. ಬೈಕ್ ನೋಂದಣಿ ಸಂಖ್ಯೆ ಆಧರಿಸಿ ಆತನನ್ನು ಬಂಧಿಸಲಾಗಿದೆ. ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾನೆ’ ಎಂದು ಪೊಲೀಸರು ತಿಳಿಸಿದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು