ಭಾನುವಾರ, ನವೆಂಬರ್ 17, 2019
28 °C

ಶಿಕ್ಷಣ ಇಲಾಖೆಯಲ್ಲಿ ಕಿರುಕುಳ: ಸಚಿವರ ಎಚ್ಚರಿಕೆ

Published:
Updated:

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಕೆಲವು ಅಧಿಕಾರಿಗಳು ತಮ್ಮ ಅಧೀನ ಸಿಬ್ಬಂದಿ ಮತ್ತು ಶಿಕ್ಷಕರಿಗೆ ಕಿರುಕುಳ ನೀಡುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಇದನ್ನು ತಡೆಗಟ್ಟಲು ಕ್ರಮ ಕೈಗೊಳ್ಳುವಂತೆ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ಅವರು ಸರ್ವ ಶಿಕ್ಷಣ ಅಭಿಯಾನದ ರಾಜ್ಯ ಯೋಜನಾ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.

‘ಇಲಾಖೆಯ ಬೆನ್ನುಲುಬಾದ ಕೆಳ ಹಂತದ ಅಧೀನ ಸಿಬ್ಬಂದಿ ಮತ್ತು ಶಿಕ್ಷಕರನ್ನು ಇಲಾಖೆಯ ಅಭಿವೃದ್ಧಿಗೆ ಪೂರಕವಾಗಿ ಬಳಸಿಕೊಳ್ಳಬೇಕಾದ ಅಧಿಕಾರಿಗಳು, ಅವರೊಂದಿಗೆ ದಬ್ಬಾಳಿಕೆಯಿಂದ ವರ್ತಿಸುವುದು ಸರಿಯಲ್ಲ. ಮುಂದಿನ ದಿನಗಳಲ್ಲಿ ಇಂತಹ ದೂರುಗಳು ಬರದಂತೆ ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದ್ದಾರೆ.

ಪ್ರತಿಕ್ರಿಯಿಸಿ (+)