ಶುಕ್ರವಾರ, ಫೆಬ್ರವರಿ 28, 2020
19 °C
ಉತ್ತಮ, ನಿವೃತ್ತ ಶಿಕ್ಷಕರಿಗೆ ಸನ್ಮಾನ–

ಹೃದಯ ನಿಧಿ ಯೋಜನೆ ವಾರ್ಷಿಕೋತ್ಸವ:ಶಿಕ್ಷಕರಿಗೆ ನಗದು ರಹಿತ ಆರೋಗ್ಯ ಸೇವೆಗೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ ಶಾಲೆಗಳ ಶಿಕ್ಷಕರಿಗೆ ನಗದುರಹಿತ ಆರೋಗ್ಯ ಸೇವೆ ಒದಗಿಸುವ ಕಾರ್ಡ್‌ ವಿತರಿಸುವಂತೆ ಮುಖ್ಯಮಂತ್ರಿಗೆ ಮತ್ತು ಶಿಕ್ಷಣ ಸಚಿವರನ್ನು ಒತ್ತಾಯಿಸಿದ್ದೇನೆ’ ಎಂದು ವಿಧಾನ ಪರಿಷತ್‌ ಸದಸ್ಯ ಪುಟ್ಟಣ್ಣ ಹೇಳಿದರು. 

ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ನಗರದಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಶಿಕ್ಷಕರು ಹಲವು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರಿಗೆ ಯಾವುದೇ ಷರತ್ತಿಲ್ಲದೆ ನಗದುರಹಿತ ಚಿಕಿತ್ಸೆ ನೀಡಲು ಗುರುತಿನ ಚೀಟಿ ಅಗತ್ಯ. ಇದನ್ನು ಜ್ಯೋತಿ ಸಂಜೀವಿನಿ ಯೋಜನೆಯಡಿ ಅಥವಾ ಪ್ರತ್ಯೇಕವಾಗಿಯೇ ನೀಡಬೇಕು’ ಎಂದರು. 

‘ಶಿಕ್ಷಕರ ವೇತನವನ್ನು ತಾಲ್ಲೂಕು, ಜಿಲ್ಲಾ ಖಜಾನೆಯಿಂದ ನೀಡುವ ವ್ಯವಸ್ಥೆ ಬಿಟ್ಟು ರಾಜ್ಯ ಖಜಾನೆಯಿಂದ (ಸ್ಟೇಟ್‌ ಹೆಡ್‌) ಪ್ರತಿ ತಿಂಗಳು 5ರೊಳಗೆ ವೇತನ ನೀಡಲು ವ್ಯವಸ್ಥೆ ಮಾಡುವಂತೆಯೂ ಬೇಡಿಕೆ ಇಟ್ಟಿದ್ದೇನೆ’ ಎಂದರು. 

ಶಿಕ್ಷಕರ ಹೃದಯ ನಿಧಿ: ‘ಶಿಕ್ಷಕರ ಹೃದಯ ನಿಧಿ’ ಯೋಜನೆಯ ನಾಲ್ಕನೇ ವಾರ್ಷಿಕೋತ್ಸವವನ್ನೂ ಇದೇ ಸಂದರ್ಭದಲ್ಲಿ ಆಚರಿಸಲಾಯಿತು. ಹೃದಯ ತೊಂದರೆಯಿಂದ ಬಳಲುವ ಅಥವಾ ಶಸ್ತ್ರಚಿಕಿತ್ಸೆಗೆ ಒಳಗಾಗುವ ಶಿಕ್ಷಕರು ಈ ‘ಹೃದಯ ಸಂಜೀವಿನಿ’ ಕಾರ್ಡ್‌ ಹೊಂದಿದ್ದರೆ ಅವರಿಗೆ ₹25 ಸಾವಿರ ನೀಡಲಾಗುತ್ತಿದೆ. ಈವರೆಗೆ 500 ಶಿಕ್ಷಕರು ಹೆಸರು ನೋಂದಾಯಿಸಿದ್ದಾರೆ. 

ಶಿಕ್ಷಕರ ಸಂಘದ ಕ್ಯಾಲೆಂಡರ್‌ ಬಿಡುಗಡೆ ಮಾಡಲಾಯಿತು. ಉತ್ತಮ ಮತ್ತು ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು