13ನೇ ಮಹಡಿಯಿಂದ ಹಾರಿ ಟೆಕಿ ಆತ್ಮಹತ್ಯೆ

ಗುರುವಾರ , ಮೇ 23, 2019
27 °C

ಫಲಿತಾಂಶ (ಮುನ್ನಡೆ+ಗೆಲುವು) 0/542LIVE

13ನೇ ಮಹಡಿಯಿಂದ ಹಾರಿ ಟೆಕಿ ಆತ್ಮಹತ್ಯೆ

Published:
Updated:
Prajavani

ಬೆಂಗಳೂರು: ಬಾಗ್ಮನೆ ಟೆಕ್‌ಪಾರ್ಕ್‌ನಲ್ಲಿ ಸಾಫ್ಟ್‌ವೇರ್ ಉದ್ಯೋಗಿಯೊಬ್ಬರು ಗುರುವಾರ ಮಧ್ಯಾಹ್ನ ಕಟ್ಟಡದ 13ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅಸ್ಸಾಂನ ಅಮ್ಲನ್ ಬರ್ಮನ್ (31) ಮೃತರು. ‘ಎಂಫಸೈಸ್’ ಕಂಪನಿಯಲ್ಲಿ ಎಂಜಿನಿಯರ್ ಆಗಿದ್ದ ಅವರು, ಮಧ್ಯಾಹ್ನ 1.45ರ ಸುಮಾರಿಗೆ 13ನೇ ಮಹಡಿಯ ಕಾಫಿ ಶಾಪ್‌ಗೆ ಹೋಗಿದ್ದರು. ಅಲ್ಲಿನ ಬಾಲ್ಕನಿಯಿಂದಲೇ ಹಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಮೇಘಾಲಯ ಹಾಗೂ ಪಶ್ಚಿಮ ಬಂಗಾಳದಲ್ಲಿ ವಿದ್ಯಾಭ್ಯಾಸ ಮುಗಿಸಿದ್ದ ಅಮ್ಲನ್, ವರ್ಷದ ಹಿಂದೆ ತಾಯಿ ಶಿಖಾ ಬರ್ಮನ್ ಜತೆ ನಗರಕ್ಕೆ ಬಂದು ಮಹದೇವಪುರದಲ್ಲಿ ನೆಲೆಸಿದ್ದರು. ಕೆಲ ದಿನಗಳಿಂದ ಖಿನ್ನತೆಗೆ ಒಳಗಾಗಿದ್ದ ಅವರು, ಅದಕ್ಕೆ ಪರಿಚಿತ ವೈದ್ಯರ ಬಳಿ ಚಿಕಿತ್ಸೆಯನ್ನೂ ಪಡೆಯುತ್ತಿದ್ದರು.

‘ಎರಡು ದಿನ ರಜೆ ಪಡೆದಿದ್ದ ಅಮ್ಲನ್, ಎಂದಿನಂತೆ ಗುರುವಾರ ಬೆಳಿಗ್ಗೆ ಕೆಲಸಕ್ಕೆ ಬಂದಿದ್ದ. ಯಾರೊಂದಿಗೂ ಸರಿಯಾಗಿ ಮಾತನಾಡುತ್ತಿರಲಿಲ್ಲ. ಮಧ್ಯಾಹ್ನ ಊಟಕ್ಕೆ ಕರೆದಾಗ, ‘ನನಗೆ ಹಸಿವಿಲ್ಲ. ಕಾಫಿ ಕುಡಿದು ಬರುತ್ತೇನೆ’ ಎಂದು ಕಾಫಿಶಾಪ್‌ಗೆ ಹೋಗಿದ್ದ. ಸೆಕ್ಯುರಿಟಿ ಗಾರ್ಡ್ ಅಲಾರಂ ಒತ್ತಿದಾಗಲೇ ನಮಗೆ ವಿಷಯ ಗೊತ್ತಾಗಿದ್ದು’ ಎಂದು ಅಮ್ಲನ್ ಸಹೋದ್ಯೋಗಿಯೊಬ್ಬರು ಹೇಳಿದರು.

‘ಮೃತರ ಮನೆಯಲ್ಲಾಗಲೀ, ಕಚೇರಿಯಲ್ಲಾಗಲೀ ಯಾವುದೇ ಪತ್ರ ಸಿಕ್ಕಿಲ್ಲ. ಮೊಬೈಲ್‌ ಹಾಗೂ ಲ್ಯಾಪ್‌ಟಾಪ್‌ಗಳನ್ನೂ ವಶಕ್ಕೆ ಪಡೆದು ಪರಿಶೀಲಿಸುತ್ತಿದ್ದೇವೆ. ‘ಖಿನ್ನತೆಯಿಂದಲೇ ಆತ್ಮಹತ್ಯೆ ಮಾಡಿಕೊಂಡಿರಬಹುದು’ ಎಂದು ಮೃತರ ತಾಯಿ ಹೇಳಿಕೆ ಕೊಟ್ಟಿದ್ದಾರೆ. ಹೀಗಾಗಿ, ಸದ್ಯಕ್ಕೆ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ’ ಎಂದು ಮಹದೇವಪುರ ಪೊಲೀಸರು ತಿಳಿಸಿದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 5

  Sad
 • 0

  Frustrated
 • 0

  Angry

Comments:

0 comments

Write the first review for this !