ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟೆಕಿ ಅಜಿತಾಬ್ ನಾಪತ್ತೆ ಪ್ರಕರಣ: ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ

Last Updated 22 ಅಕ್ಟೋಬರ್ 2018, 19:34 IST
ಅಕ್ಷರ ಗಾತ್ರ

ಬೆಂಗಳೂರು: ಟೆಕಿ ಅಜಿತಾಬ್ ನಾಪತ್ತೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿ ಹೈಕೋರ್ಟ್ ಆದೇಶಿಸಿದೆ.

ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಅಜಿತಾಬ್ ತಂದೆ ಅಶೋಕ್‌ ಕುಮಾರ್ ಸಿನ್ಹಾ ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ಮಾನ್ಯ ಮಾಡಿದೆ.

‘ತನಿಖೆಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನೂ ಎಸ್‌ಐಟಿ ಅಧಿಕಾರಿಗಳು ತಕ್ಷಣವೇ ಸಿಬಿಐ‌ಗೆ ನೀಡಬೇಕು. ಕೂಡಲೇ ಸಿಬಿಐ ತನಿಖೆ ಆರಂಭಿಸಬೇಕು’ ಎಂದು ಆದೇಶಿಸಲಾಗಿದೆ.

‘ವಿಶೇಷ ತನಿಖಾ ದಳದ (ಎಸ್‌ಐಟಿ) ಪೊಲೀಸರು ಎಲ್ಲ ಆಯಾಮಗಳಲ್ಲೂ ತೃಪ್ತಿಕರ ತನಿಖೆ ನಡೆಸಿದ್ದಾರೆ. ಆದರೆ, ಹೊರ ರಾಜ್ಯಗಳ ತನಿಖಾ ಸಂಸ್ಥೆಯೊಂದಿಗೆ ಸಮನ್ವಯದ ಕೊರತೆ ಇದೆ. ಇದರಿಂದಾಗಿ ನಿರೀಕ್ಷಿತ ಫಲಿತಾಂಶ ಸಿಕ್ಕಿಲ್ಲ. ಆದ್ದರಿಂದ ಈ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವ ಕಾರಣ ತನಿಖೆಯನ್ನು ಸಿಬಿಐ ನಡೆಸಬೇಕು‘ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಪ್ರಕರಣವೇನು?: ಬೆಂಗಳೂರಿನಲ್ಲಿರುವ ಬ್ರಿಟಿಷ್ ಟೆಲಿಕಾಂ ಕಂಪೆನಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದ ಕುಮಾರ್ ಅಜಿತಾಬ್ 2017ರ ಡಿಸೆಂಬರ್ 18ರ ಸಂಜೆ 6.30ಕ್ಕೆ ನಾಪತ್ತೆಯಾಗಿದ್ದರು. ಈ ಬಗ್ಗೆ ಕುಮಾರ್ ತಂದೆ ಅಶೋಕ್ ಕುಮಾರ್ ಸಿನ್ಹಾ ವೈಟ್‌ಫೀಲ್ಡ್ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಈ ದೂರಿನನ್ವಯ ಪೊಲೀಸರು ಡಿ.20ರಂದು ಹಾಗೂ 29 ರಂದು ಎರಡು ಎಫ್‌ಐಆರ್ ದಾಖಲಿಸಿದ್ದರು.

ಈ ಬೆಳವಣಿಗೆ ಮಧ್ಯದಲ್ಲೇ ಸಿನ್ಹಾ, ‘ಪೊಲೀಸರು ಈವರೆಗೂ ನನ್ನ ಮಗನನ್ನು ಪತ್ತೆ ಹಚ್ಚಿಲ್ಲ. ಆದ್ದರಿಂದ, ತನಿಖೆಯನ್ನು ಸಿಬಿಐಗೆ ವಹಿಸಲು ನಿರ್ದೇಶಿಸಬೇಕು’ ಎಂದು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT