ಮಂಗಳವಾರ, ಆಗಸ್ಟ್ 3, 2021
22 °C

ಜೆಟ್‌ ಏರ್‌ವೇಸ್‌ ವಿಮಾನದಲ್ಲಿ ತಾಂತ್ರಿಕ ದೋಷ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜೆಟ್‌ ಏರ್‌ವೇಸ್‌ ವಿಮಾನದಲ್ಲಿ ಗುರುವಾರ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ, ನಿಲ್ದಾಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. 

ಮಂಗಳೂರಿಗೆ ಬೆಳಿಗ್ಗೆ 7 ಗಂಟೆಗೆ ಹಾರಾಟ ನಡೆಸಬೇಕಿದ್ದ ‘9ಡಬ್ಲ್ಯು713’ ಸಂಖ್ಯೆ ವಿಮಾನದಲ್ಲಿ ಪ್ರಯಾಣಿಕರು ಏರುವ ವೇಳೆಯೇ ತಾಂತ್ರಿಕ ದೋಷ ಕಾಣಿಸಿಕೊಂಡಿತು. ಅದನ್ನು ಗಮನಿಸಿದ ಪೈಲಟ್‌, ನಿಲ್ದಾಣದ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿ ಪ್ರಯಾಣಿಕರನ್ನೆಲ್ಲ ಕೆಳಗೆ ಇಳಿಸಿದರು ಎಂದು ಮೂಲಗಳು ತಿಳಿಸಿವೆ.

‘ವಿಮಾನದಲ್ಲಿ ಮಂಗಳೂರಿಗೆ ಹೋಗಲು 71 ಪ್ರಯಾಣಿಕರು ಟಿಕೆಟ್ ಕಾಯ್ದಿರಿಸಿದ್ದರು. ನಿಗದಿತ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದರಿಂದ, ಬೇರೊಂದು ವಿಮಾನದಲ್ಲಿ ಪ್ರಯಾಣಿಕರನ್ನು ಮಂಗಳೂರಿಗೆ ಕಳುಹಿಸಿಕೊಡಲಾಯಿತು’ ಎಂದು ತಿಳಿದುಬಂದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು