ಭಾನುವಾರ, ಜೂನ್ 7, 2020
22 °C

ದೇಗುಲ ತೆರೆಯಲು ಚಿಂತನೆ: ಸಚಿವ ಕೋಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕುಂದಾಪುರ: ದೇಗುಲಗಳನ್ನು ಭಕ್ತರಿಗಾಗಿ ತೆರೆಯುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ದೇಗುಲ ತೆರೆದರೆ ಜನದಟ್ಟಣೆ ಸಮಸ್ಯೆ ತಲೆದೋರುವ ಸಾಧ್ಯತೆ ಇರುವುದರಿಂದ ಸಾಧಕಬಾಧಕಗಳ ಬಗ್ಗೆ ಅಧಿಕಾರಿಗಳ ಜತೆ ಹೆಚ್ಚಿನ ಚರ್ಚೆ ನಡೆಯುತ್ತಿದೆ’ ಎಂದು ರಾಜ್ಯ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಭಿಪ್ರಾಯ ವ್ಯಕ್ತಪಡಿಸಿದರು.

ಕೊಲ್ಲೂರಿನಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಯಕ್ಷಗಾನ ಕಲಾವಿದರು ಹಾಗೂ ಕಾರ್ಮಿಕರಿಗೆ ಆಹಾರ ಕಿಟ್‌ ವಿತರಿಸಿ ಅವರು ಮಾತನಾಡಿದರು. ಭಕ್ತರಿಗೆ ದರ್ಶನದ ಅವಕಾಶ ಇಲ್ಲದೆ ಇದ್ದರೂ, ದೇವಸ್ಥಾನಗಳಲ್ಲಿ ನಡೆಯುವ ಪೂಜಾ ಕಾರ್ಯಗಳಿಗೆ ಯಾವುದೇ ಅಡಚಣೆ ಉಂಟಾಗಿಲ್ಲ.  ಅರ್ಚಕರಿಗೆ ಆದಾಯ ಇಲ್ಲದೆ ಇರುವುದರಿಂದ 34 ಸಾವಿರಕ್ಕೂ ಅಧಿಕ ಅರ್ಚಕರಿಗೆ ಕಿಟ್ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಅರ್ಚಕರಿಗೆ ಆರ್ಥಿಕ ನೆರವು ನೀಡುವ ಬಗ್ಗೆಯೂ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಗಮನಕ್ಕೆ ತರಲಾಗಿದೆ. ಉದ್ದೇಶಿತ ಉಚಿತ ಸಾಮೂಹಿಕ ವಿವಾಹದ ಕುರಿತು ಧಾರ್ಮಿಕ ಪರಿಷತ್ ಸಭೆಯಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.