ಬುಧವಾರ, ಆಗಸ್ಟ್ 21, 2019
27 °C

ಟಿಪ್ಪು ಜಯಂತಿ ಆಚರಣೆಗೆ ಆಗ್ರಹ

Published:
Updated:

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣವೇ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಟಿಪ್ಪು ಜಯಂತಿ ಆಚರಣೆಯನ್ನು ರದ್ದು ಪಡೆಸಿರುವುದು ಸರಿಯಲ್ಲ. ಈ ಆದೇಶವನ್ನು ಕೂಡಲೇ ವಾಪಸ್ ಪಡೆಯಬೇಕು ಎಂದು ಟಿಪ್ಪು ಸುಲ್ತಾನ್‌ ಸಂಯುಕ್ತ ರಂಗ ಒತ್ತಾಯಿಸಿದೆ.

‘ಟಿಪ್ಪು ಸುಲ್ತಾನ್ ಪ್ರಥಮ ಸ್ವಾತಂತ್ರ್ಯ ಹೋರಾಟಗಾರ. ಇಂತಹ ಮಹಾನ್ ವ್ಯಕ್ತಿಯ ಆಚರಣೆಯನ್ನು ಸರ್ಕಾರ ಏಕಾಏಕಿ ನಿಷೇಧಿಸಿರುವುದು ನಿಜಕ್ಕೂ ಖಂಡನೀಯ. ಮುಖ್ಯಮಂತ್ರಿಗಳ ಆದೇಶಕ್ಕೆ ಪ್ರಗತಿಪರ ಸಂಘಟನೆಗಳು ಸಾಕಷ್ಟು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಕೂಡಲೇ ಈ ಆದೇಶ ಹಿಂಪಡೆಯಬೇಕು. ಇಲ್ಲದಿದ್ದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಎನ್.ವಿ.ನರಸಿಂಹಯ್ಯ ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘2015ರಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಟಿಪ್ಪು ಜಯಂತಿಗೆ ಚಾಲನೆ ನೀಡಿತ್ತು. ಆದರೆ ಈಗಿನ ರಾಜ್ಯ ಸರ್ಕಾರ ನಿಷೇಧಿಸಿ ಆದೇಶ ಹೊರಡಿಸಿರುವುದು ಖಂಡನೀಯ’ ಎಂದು ಕಮಲಮ್ಮ ತಿಳಿಸಿದರು.

Post Comments (+)