ಬುಧವಾರ, ಸೆಪ್ಟೆಂಬರ್ 22, 2021
29 °C

ಸ್ವಾಮಿ ಸೋದರಿ ಪತಿ ವಿಚಾರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಮುಖ್ಯ ಅಭಿವೃದ್ಧಿ ಅಧಿಕಾರಿ ಟಿ.ಆರ್‌. ಸ್ವಾಮಿ ಅವರ ಸೋದರಿಯ ಪತಿಯನ್ನು ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಗುರುವಾರ ವಿಚಾರಣೆ ನಡೆಸಿದರು.

ಶುಕ್ರವಾರವೂ ವಿಚಾರಣೆ ಮುಂದುವರಿಯಲಿದೆ. ಮಲ್ಲೇಶ್ವರದ ಮಂತ್ರಿ ಗ್ರೀನ್‌ ಅಪಾರ್ಟ್‌ಮೆಂಟ್‌ನ  14 ಹಾಗೂ 15ನೇ ಮಹಡಿಯಲ್ಲಿ ಕ್ರಮವಾಗಿ ಸ್ವಾಮಿ ಮತ್ತು ಅವರ ಸೋದರಿ ಕುಟುಂಬ ವಾಸವಾಗಿದೆ.

ಕಳೆದ ವಾರ ನಡೆದ ದಾಳಿ ವೇಳೆ ಎರಡೂ ಮನೆಗಳಿಂದ ಹಣ ತುಂಬಿದ ಸೂಟ್‌ಕೇಸ್‌ ಮತ್ತು ಚೀಲವನ್ನು ಕೆಳಕ್ಕೆ ಎಸೆಯಲಾಗಿತ್ತು. ಅವನ್ನು ಎಸಿಬಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಸೂಟ್‌ಕೇಸ್‌ ಹಾಗೂ ಚೀಲದಲ್ಲಿ ಎಷ್ಟು ಹಣವಿತ್ತು ಎಂದು ಪ್ರತ್ಯೇಕವಾಗಿ ಲೆಕ್ಕ ಹಾಕಲಿಲ್ಲ. ಮನೆಯಲ್ಲಿ ಜಪ್ತಿ ಮಾಡಿದ ಹಣದ ಜೊತೆ ಇದನ್ನು ಸೇರಿಸಿ ಎಣಿಸಲಾಯಿತು ಎಂದು ಮೂಲಗಳು ತಿಳಿಸಿವೆ.

ಸ್ವಾಮಿ ಇದುವರೆಗೆ ವಿಚಾರಣೆಗೆ ಗೈರು ಹಾಜರಾಗಿದ್ದು, ಅನಾರೋಗ್ಯದ ನಿಮಿತ್ತ ಬರಲು ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ. ಗೌಡಯ್ಯ ವಿಚಾರಣೆಗೆ ಸಹಕರಿಸುತ್ತಿದ್ದಾರೆ ಎನ್ನಲಾಗಿದೆ. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು