ವರ್ಗಾವಣೆಗೆ ಹೆಚ್ಚುವರಿ ಮಾರ್ಗಸೂಚಿ ಸೇರ್ಪಡೆ

7

ವರ್ಗಾವಣೆಗೆ ಹೆಚ್ಚುವರಿ ಮಾರ್ಗಸೂಚಿ ಸೇರ್ಪಡೆ

Published:
Updated:

ಬೆಂಗಳೂರು: ಸರ್ಕಾರಿ ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹೆಚ್ಚುವರಿ ಮಾರ್ಗಸೂಚಿಯನ್ನು ಹೊರಡಿಸಿದ್ದು, ವರ್ಗಾವಣೆಗೊಂಡ ನೌಕರರು ವೈದ್ಯಕೀಯ ಕಾರಣ ನೀಡಿ ರಜೆ ಹಾಕಿದರೆ, ಅದಕ್ಕೆ ಪೂರಕ ದಾಖಲೆಗಳನ್ನು ನೀಡಬೇಕು. ಇಲ್ಲದಿದ್ದರೆ ಅನಧಿಕೃತ ಗೈರುಹಾಜರಿ ಎಂದು ಪರಿಗಣಿಸಲಾಗುತ್ತದೆ.

ವರ್ಗಾವಣೆಯ ಪೂರ್ವದಲ್ಲಿ ಅಥವಾ ವರ್ಗಾಯಿಸಲಾದ ಸ್ಥಳದಲ್ಲಿ ಕರ್ತವ್ಯಕ್ಕೆ ಹಾಜರಾಗುವ ಸಂದರ್ಭದಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದರೆ, ಅಗತ್ಯ ವೈದ್ಯಕೀಯ ದಾಖಲೆಗಳೊಂದಿಗೆ ರಜೆ ಕೋರಿ ಅರ್ಜಿ ಸಲ್ಲಿಸಿದ್ದಲ್ಲಿ, ರಜೆ ಮಂಜೂರು ಮಾಡುವ ಬಗ್ಗೆ ಸಕ್ಷಮ ಪ್ರಾಧಿಕಾರ ನಿರ್ಣಯ ತೆಗೆದುಕೊಳ್ಳಬಹುದು.

ಒಳರೋಗಿಯಾಗಿದ್ದವರು ಆಸ್ಪತ್ರೆಯಿಂದ ಬಿಡುಗಡೆಯಾಗಿ ಬಳಿಕ ಹೊರರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದರೆ ಅಥವಾ ವೈದ್ಯಕೀಯ ಸಲಹೆ ಮೇರೆಗೆ ವಿಶ್ರಾಂತಿ ಪಡೆಯುತ್ತಿದ್ದರೆ, ವರ್ಗಾಯಿಸಿದ ಸ್ಥಳದಲ್ಲಿ ಕರ್ತವ್ಯಕ್ಕೆ ಹಾಜರಾಗಿ, ಅಲ್ಲಿನ ಸಕ್ಷಮ ಪ್ರಾಧಿಕಾರದಿಂದಲೇ ರಜೆ ಪಡೆಯಬೇಕು. ಇಲ್ಲದಿದ್ದರೆ ಅನಧಿಕೃತ ಗೈರು ಹಾಜರಿ ಎಂದು ಪರಿಗಣಿಸಲಾಗುತ್ತದೆ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !