ಸೋಮವಾರ, ಸೆಪ್ಟೆಂಬರ್ 16, 2019
26 °C

ಯುಪಿಎಸ್‌ಸಿ ಪರೀಕ್ಷೆ: ಸಾಧಕರಿಗೆ ಸನ್ಮಾನ

Published:
Updated:

ಬೆಂಗಳೂರು: 2018ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆಯಲ್ಲಿ ಯಶಸ್ಸು ಗಳಿಸಿ ಐಎಎಸ್, ಐಪಿಎಸ್ ಮತ್ತು ಐಆರ್‌ಎಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳನ್ನು ಗ್ರೇಸ್‌ ಐಎಎಸ್ ಸಂಸ್ಥೆಯಿಂದ ಸನ್ಮಾನಿಸಲಾಯಿತು.

ಐಪಿಎಸ್ ಅಧಿಕಾರಿ ಶರಣಪ್ಪ ಮಾತನಾಡಿ, 'ಯುಪಿಎಸ್‌ಸಿ ಪರೀಕ್ಷೆ ತೆಗೆದುಕೊಂಡ ಅಭ್ಯರ್ಥಿಗಳಿಗೆ ಗ್ರೇಸ್‌ ಐಎಎಸ್ ಸಂಸ್ಥೆ ತರಬೇತಿ ನೀಡುತ್ತಿರುವುದು ಉತ್ತಮವಾದ ಕೆಲಸ' ಎಂದರು.

ಯುಪಿಎಸ್‌ಸಿ ಪರೀಕ್ಷೆಯಲ್ಲಿ 17ನೇ ರ‍್ಯಾಂಕ್ ಪಡೆದ ರಾಹುಲ್ ಶರಣಪ್ಪ ಸಂಕನೂರ ಮಾತನಾಡಿ, ‘ಸಂಪೂರ್ಣ ಬದ್ಧತೆಯೊಂದಿಗೆ ಸಿದ್ಧತೆ ನಡೆಸಿದರೆ ಯಶಸ್ಸು ಸಾಧಿಸಬಹುದು’ ಎಂದರು.

Post Comments (+)