ಮಂಗಳವಾರ, ಸೆಪ್ಟೆಂಬರ್ 29, 2020
21 °C

ಹೆಂಗಳೆಯರಿಗೆ ವರ ಮಹಾಲಕ್ಷ್ಮಿ ಹಬ್ಬದ ಸಂಭ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಮಹಿಳೆಯರು ಶುಕ್ರವಾರ ವರ ಮಹಾಲಕ್ಷ್ಮಿ ಹಬ್ಬವನ್ನು ಸಾಂಪ್ರದಾಯಿಕವಾಗಿ ಸಂಭ್ರಮದಿಂದ ಆಚರಿಸಿದರು.

ಮನೆಗಳಲ್ಲಿ ಮಹಾಲಕ್ಷ್ಮಿ ದೇವಿಯನ್ನು ಪ್ರತಿಷ್ಠಾಪಿಸಿ ವಿಶೇಷವಾಗಿ ಅಲಂಕರಿಸಿ ಮನೆ ಮಂದಿ ಎಲ್ಲರೂ ಸೇರಿ ಪೂಜಿಸಿದರು. ವಿಶೇಷವಾಗಿ ಸುಮಂಗಲೆಯರು ವ್ರತಾಚರಣೆ ಮಾಡಿ ನಮಿಸಿ ಒಳಿತಿಗಾಗಿ ಪ್ರಾರ್ಥಿಸಿದರು. ಸಂಜೆ ಅಕ್ಕಪಕ್ಕದವರು ಹಾಗೂ ಬಂಧುಗಳ ಪೈಕಿ ಮುತ್ತೈದೆಯರನ್ನು ಮನೆಗಳಿಗೆ ಆಹ್ವಾನಿಸಿ ಅರಿಸಿನ–ಕುಂಕುಮ ನೀಡಿ ಸಂಭ್ರಮವನ್ನು ಹಂಚಿಕೊಂಡರು. ಈ ಬಾರಿ ಹಿಂದಿನ ವರ್ಷಗಳಷ್ಟು ಅದ್ಧೂರಿ ಕಂಡುಬರಲಿಲ್ಲ. ಕೊರೊನಾ ಭೀತಿ ಹಿನ್ನೆಲೆಯಲ್ಲಿ ಕೆಲವರನ್ನು ಮಾತ್ರವೇ ಮನೆಗಳಿಗೆ ಆಹ್ವಾನಿಸಿದ್ದರು.

ಹಬ್ಬದ ಅಂಗವಾಗಿ ಲಕ್ಷ್ಮಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ‍ಪುನಸ್ಕಾರಗಳು ನೆರವೇರಿದವು. ಅಲ್ಲಿಯೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರಲಿಲ್ಲ.

ಮಾರುಕಟ್ಟೆಯಲ್ಲಿ ಹೂವು, ಹಣ್ಣುಗಳು ಹಾಗೂ ಪೂಜಾ ಸಾಮಗ್ರಿಗಳಿಗೆ ಬೇಡಿಕೆ ಕಂಡುಬಂದಿತು. ಆದರೆ, ಕೊರೊನಾ ಸೋಂಕಿನ ಆತಂಕದ ಕಾರಣದಿಂದಾಗಿ ಹಿಂದಿನ ವರ್ಷಗಳಷ್ಟು ಜನಸಂದಣಿ ಕಂಡುಬರಲಿಲ್ಲ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು