ಶನಿವಾರ ಹೊಸೂರು ರಸ್ತೆ ಬಂದ್‌: ವಾಟಾಳ್‌ ನಾಗರಾಜ್‌

7

ಶನಿವಾರ ಹೊಸೂರು ರಸ್ತೆ ಬಂದ್‌: ವಾಟಾಳ್‌ ನಾಗರಾಜ್‌

Published:
Updated:
Prajavani

ಬೆಂಗಳೂರು: ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ವಿರೋಧ ವ್ಯಕ್ತಪಡಿಸುತ್ತಿರುವುದನ್ನು ಖಂಡಿಸಿ ಶನಿವಾರ ಅತ್ತಿಬೆಲೆ ಬಳಿ ಹೊಸೂರು ರಸ್ತೆ ಬಂದ್‌ ಮಾಡುವ ಮೂಲಕ ಪ್ರತಿಭಟನೆ ನಡೆಸಲಾಗುತ್ತದೆ.

 ಅಂದು, ತಮಿಳುನಾಡಿಗೆ ಹೋಗುವ ಹಾಗೂ ಆ ಕಡೆಯಿಂದ ಬರುವ ವಾಹನಗಳನ್ನು ತಡೆಯಲಾಗುತ್ತದೆ ಎಂದು ಕನ್ನಡ ಚಳವಳಿ ವಾಟಾಳ್‌ ಪಕ್ಷದ ಅಧ್ಯಕ್ಷ ವಾಟಾಳ್‌ ನಾಗರಾಜ್‌ ತಿಳಿಸಿದರು.

‘‌ತಮಿಳುನಾಡಿಗೆ ಮೇಕೆದಾಟು ಯೋಜನೆ ಕುರಿತು ಮಾತನಾಡಲು ಯಾವುದೇ ಅಧಿಕಾರವಿಲ್ಲ. ರಾಜ್ಯ ಸರ್ಕಾರ ಕೂಡಲೇ ಯೋಜನೆಯನ್ನು ಆರಂಭಿಸಬೇಕು’ ಎಂದು ಆಗ್ರಹಿಸಿದರು.

ಬರಹ ಇಷ್ಟವಾಯಿತೆ?

 • 8

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !