ಭಾನುವಾರ, ಡಿಸೆಂಬರ್ 8, 2019
21 °C
ಮೆರವಣಿಗೆ

ವಿಜೃಂಭಣೆಯಿಂದ ನಡೆದ ವೀರಭದ್ರೇಶ್ವರ ರಥೋತ್ಸವ, ಮೆರುಗು ನೀಡಿದ ಕಲಾತಂಡಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಶ್ರೀ ವೀರಭದ್ರೇಶ್ವರ ಸ್ವಾಮಿಯ ಅಗ್ನಿ‌ ಮಹೋತ್ಸವ ಹಾಗೂ ರಥೋತ್ಸವ ಮಂಗಳವಾರ ಅದ್ಧೂರಿಯಾಗಿ ನಡೆಯಿತು.

ಬೆಳಿಗ್ಗೆ ದೇವಸ್ಥಾನದಲ್ಲಿ ನಡೆದ ವಿಶೇಷ ಪೂಜೆಯಲ್ಲಿ ನೂರಾರು ಭಕ್ತರು ಭಾಗವಹಿಸಿದ್ದರು. ದೇವಸ್ಥಾನದ ಮುಂಭಾಗದಿಂದ ಮೆರವಣಿಗೆಗೆ ಚಾಲನೆ ನೀಡಲಾಯಿತು. ಕರಡಿ ಮಜಲು, ದಾಲಪಟ, ಡೊಳ್ಳು, ನಂದಿಕೋಲು, ವೀರಗಾಸೆ ತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವು. ಎತ್ತುಗಳ ಮೆರವಣಿಗೆ ವಿಶೇಷ ಆಕರ್ಷಣೆಯಾಗಿತ್ತು.

ಅಕ್ಕಿ ಹೊಂಡ, ದುರ್ಗದ ಬೈಲ್, ಅಕ್ಜಿಪೇಟೆ, ಜಂಗ್ಲಿಪೇಟೆ, ಹಿರೇಪೆಟೆ, ಗೋಡ್ಕೆ ಓಣಿ ಮೂಲಕ ಸಾಗಿದ ಮೆರವಣಿಗೆಯಲ್ಲಿ ಭಾರಿ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು. ಮೆರವಣಿಗೆ ಮುಗಿದ ನಂತರ ಪಲ್ಲಕ್ಕಿಯನ್ನು ಅಗ್ನಿ ಮೂಲಕ ದೇವಸ್ಥಾನದ ಒಳಗೆ ಕೊಂಡೊಯ್ಯಲಾಯಿತು (ಅಗ್ನಿ ಪ್ರವೇಶ). ಪೂಜೆ ಮತ್ತು ಮಹಾ ಮಂಗಳಾರತಿ ಆ ನಂತರ ರಥೋತ್ಸವ ನಡೆಯಿತು.

ಮಧ್ಯಾಹ್ನ 12 ಗಂಟೆ ಸುಮಾರಿಗೆ ಅನ್ನ ಸಂತರ್ಪಣೆಗೆ ಚಾಲನೆ ನೀಡಲಾಯಿತು. ಸಂಜೆ ವರೆಗೆ ಸಾವಿರಾರು ಜನ ಪ್ರಸಾದ ಸ್ವೀಕರಿಸಿದರು.

ಪ್ರತಿಕ್ರಿಯಿಸಿ (+)