ವಿಧಾನಸೌಧ ಚಲೋ 12ಕ್ಕೆ

7

ವಿಧಾನಸೌಧ ಚಲೋ 12ಕ್ಕೆ

Published:
Updated:

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಅರಣ್ಯವಾಸಿಗಳಿಗೆ ಹಕ್ಕುಪತ್ರ ನೀಡಬೇಕು ಎಂದು ಆಗ್ರಹಿಸಿ ಉತ್ತರ ಕನ್ನಡ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಇದೇ 12ರಂದು ವಿಧಾನಸೌಧ ಚಲೋ ಹಮ್ಮಿಕೊಂಡಿದೆ.

ಇಲ್ಲಿ ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ವೇದಿಕೆಯ ಅಧ್ಯಕ್ಷ ಎ.ರವೀಂದ್ರ ನಾಯ್ಕ,‘ಜಿಲ್ಲೆಯಲ್ಲಿ 8,500 ಚ.ಕಿ.ಮೀ ವಿಸ್ತೀರ್ಣದ ಅರಣ್ಯ ಭೂಮಿಯಿದೆ. ಅರಣ್ಯವಾಸಿಗಳು ಹಕ್ಕುಪತ್ರ ಬಯಸಿ ಸಲ್ಲಿಸಿದ 87,625 ಅರ್ಜಿಗಳಲ್ಲಿ ಕೇವಲ 2,852 ಅರ್ಜಿ ಪುರಸ್ಕರಿಸಿರುವುದರಿಂದ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ’ ಎಂದು ತಿಳಿಸಿದರು.

‘ಬುಡಕಟ್ಟು ಮತ್ತು ಇತರ ಪಾರಂಪರಿಕ ಅರಣ್ಯವಾಸಿಗಳ ಅರಣ್ಯ ಹಕ್ಕು ಕಾಯ್ದೆಯಲ್ಲಿ ಹಕ್ಕುಪತ್ರ ನೀಡುವ ಸಂದರ್ಭದಲ್ಲಿ ನಿರ್ದಿಷ್ಟ ದಾಖಲಾತಿಗೆ ಒತ್ತಾಯಿಸಬಾರದು ಎಂದಿದೆ. ಆದರೂ ಸೂಕ್ತ ದಾಖಲೆ ನೀಡಿಲ್ಲ ಎಂದು ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಇವರನ್ನು  ಒಕ್ಕಲೆಬ್ಬಿಸುವ ಪ್ರಯತ್ನವೂ ನಡೆಯುತ್ತಿದೆ. ಹೀಗಾಗಿ ಹೋರಾಟ ಹಮ್ಮಿಕೊಳ್ಳಲಾಗಿದೆ’ ಎಂದು ಹೇಳಿದರು.

‘ಹೋರಾಟಕ್ಕೆ ಸರ್ಕಾರ ಸ್ಪಂದಿಸದಿದ್ದರೆ, ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸಿ ಬಿಸಿ ಮುಟ್ಟಿಸುತ್ತೇವೆ’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !