ಶನಿವಾರ, ನವೆಂಬರ್ 23, 2019
18 °C

ರಾಜಕೀಯ ಏಳಿಗೆ ತಡೆಯಲು ಷಡ್ಯಂತ್ರ: ಬಿ.ವೈ.ವಿಜಯೇಂದ್ರ

Published:
Updated:

ಬೆಂಗಳೂರು: ತನ್ನನ್ನು ಮುಂದಿಟ್ಟುಕೊಂಡು ತಮ್ಮ ತಂದೆಯ ಆಡಳಿತ ಮತ್ತು ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಕೆಲವರು ಪ್ರಯತ್ನಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಸ್ವಪಕ್ಷೀಯರ ವಿರುದ್ದವೇ ಹರಿಹಾಯ್ದಿದ್ದಾರೆ.

‘ಮಕ್ಕಳನ್ನು ಹದ್ದುಬಸ್ತಿನಲ್ಲಿಡಿ’ ಎಂದು ಯಡಿಯೂರಪ್ಪ ಅವರಿಗೆ ಹೈಕಮಾಂಡ್‌ ಎಚ್ಚರಿಕೆ ನೀಡಿದೆ ಎಂಬ ಮಾಹಿತಿ ಸಾಮಾಜಿಕ ಜಾಲತಾಣ ಮಾಧ್ಯಮದಲ್ಲಿ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ, ವಿರೋಧಿಗಳ ಬಗ್ಗೆ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಮುಖ್ಯಮಂತ್ರಿಯವರ ಪುತ್ರ ಎಂಬ ಒಂದೇ ಕಾರಣಕ್ಕೆ ಕೆಲ ಪಟ್ಟಭದ್ರರು ನನ್ನ ವಿರುದ್ಧ ರಾಜಕೀಯ ದುರುದ್ದೇಶದಿಂದ ಅಪ
ಪ್ರಚಾರ ನಡೆಸುತ್ತಿದ್ದು, ರಾಜಕೀಯ ಏಳಿಗೆಯನ್ನು ತಡೆಯಲು ಷಡ್ಯಂತ್ರ ನಡೆಸಲಾಗಿದೆ’ ಎಂದು ವಿಜಯೇಂದ್ರ ದೂರಿದ್ದಾರೆ.

‘ಸರ್ಕಾರದ ಆಡಳಿತ ಮತ್ತು ವರ್ಗಾವಣೆ ಪ್ರಕ್ರಿಯೆಯಲ್ಲಿ ನಾನು ಹಸ್ತಕ್ಷೇಪ ಮಾಡುತ್ತಿದ್ದೇನೆ ಎಂದು ಕೆಲವರು ವ್ಯವಸ್ಥಿತವಾಗಿ ಅಪಪ್ರಚಾರ ನಡೆಸುತ್ತಿದ್ದಾರೆ. ಇದಕ್ಕೆ ರಾಜಕೀಯ ಹತಾಶೆಯೇ ಕಾರಣ ಎಂದಿದ್ದಾರೆ.

ಪ್ರತಿಕ್ರಿಯಿಸಿ (+)