ಶುಕ್ರವಾರ, ನವೆಂಬರ್ 22, 2019
22 °C

ಒಕ್ಕಲಿಗರ ಸಂಘದ ಜಮೀನು ಗುತ್ತಿಗೆ ನವೀಕರಣ: ಮಧ್ಯಂತರ ತಡೆ

Published:
Updated:

ಬೆಂಗಳೂರು: ‘ಬೆಂಗಳೂರು ಉತ್ತರ ತಾಲ್ಲೂಕಿನ ಶ್ರೀಗಂಧದ ಕಾವಲ್ ಪ್ರದೇಶದಲ್ಲಿ ಒಕ್ಕಲಿಗರ ಸಂಘಕ್ಕೆ ನೀಡಲಾಗಿರುವ 10 ಎಕರೆ ಜಮೀನಿನ ಗುತ್ತಿಗೆ ನವೀಕರಣಕ್ಕೆ ಸಂಬಂಧಿಸಿದ ಗುತ್ತಿಗೆ ಕರಾರುಪತ್ರವನ್ನು ಕಾರ್ಯಗತಗೊಳಿಸಬಾರದು’ ಎಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.

‘ಗುತ್ತಿಗೆ ನವೀಕರಣ ಮಾಡಿ 2012ರಲ್ಲಿ ಹೊರಡಿಸಿರುವ ಆದೇಶ ರದ್ದುಪಡಿಸಬೇಕು’ ಎಂದು ಕೋರಿ ವಕೀಲ ಎಸ್. ಉಮಾಪತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್‌.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು. ‘ಅರ್ಜಿಗೆ ಸಂಬಂಧಿಸಿದಂತೆ ಹೆಚ್ಚುವರಿ ಆಕ್ಷೇಪಣೆ ಸಲ್ಲಿಸಿ’ ಎಂದು ಸರ್ಕಾರಕ್ಕೆ ಸೂಚಿಸಿದ ನ್ಯಾಯಪೀಠ, ವಿಚಾರಣೆಯನ್ನು ಅಕ್ಟೋಬರ್‌ 21ಕ್ಕೆ ಮುಂದೂಡಿದೆ.

ಪ್ರತಿಕ್ರಿಯಿಸಿ (+)