‘ತಂತ್ರಜ್ಞಾನ ಕ್ಷೇತ್ರದಲ್ಲಿ ಮಹಿಳೆಗೆ ಅವಕಾಶ ಹೆಚ್ಚು’

7

‘ತಂತ್ರಜ್ಞಾನ ಕ್ಷೇತ್ರದಲ್ಲಿ ಮಹಿಳೆಗೆ ಅವಕಾಶ ಹೆಚ್ಚು’

Published:
Updated:
Deccan Herald

ಬೆಂಗಳೂರು: ‘ಮಹಿಳೆಯರು ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಲು ಸಾಕಷ್ಟು ಮಾರ್ಗಗಳಿವೆ. ತಂತ್ರಜ್ಞಾನದ ಕ್ಷೇತ್ರಗಳಲ್ಲೂ ಅವಕಾಶಗಳು ಹೇರಳವಾಗಿವೆ’ ಎಂದು ಉದ್ಯಮಿ ಅಖಿಲಾ ಕೃಷ್ಣಮೂರ್ತಿ ಅಭಿಪ್ರಾಯಪಟ್ಟರು.

ಜೈನ್‌ ವಿಶ್ವವಿದ್ಯಾಲಯದಲ್ಲಿ ಶನಿವಾರ ಏರ್ಪಡಿಸಿದ್ದ ‘ಭಾರತದ ಆರ್ಥಿಕತೆಯಲ್ಲಿ ಸ್ವಾವಲಂಬಿ ಮಹಿಳೆಯರ ಪಾತ್ರ’ ಕುರಿತ ಸಂವಾದದಲ್ಲಿ ಅವರು ಮಾತನಾಡಿದರು.

‘ಮಾಹಿತಿ ತಂತ್ರಜ್ಞಾನ ಕ್ಷೇತ್ರ ಮಹಿಳೆಯರಿಗೆ ಜಾಗತಿಕ ಅಸ್ಮಿತೆಯನ್ನು ತಂದುಕೊಟ್ಟಿದೆ. ಇಲ್ಲಿನ ವಾತಾವರಣ ಮಹಿಳೆಯರಿಗೆ ಸೂಕ್ತವಾಗಿದೆ. ಈ ಕ್ಷೇತ್ರದಲ್ಲಿ ಸಾಕಷ್ಟು ಮಹಿಳೆಯರು ನೂತನ ಕಂಪನಿಗಳನ್ನು ಪ್ರಾರಂಭಿಸಿ ಯಶಸ್ವಿಯಾಗಿದ್ದಾರೆ’ ಎಂದರು.

ನೀತಿ ಆಯೋಗದ ಸಲಹೆಗಾರ್ತಿ ಅನ್ನಾ ರಾಯ್‌ ಅವರ ಪ್ರಶ್ನೆಗೆ ಉತ್ತರಿಸಿದ ಅಖಿಲಾ, ‘ಸ್ವಾವಲಂಬಿ ಮಹಿಳೆಗೆ ಇನ್ನೊಬ್ಬ ಮಹಿಳೆಯೇ ಸ್ಫೂರ್ತಿಯಾಗಿರಬೇಕು ಎಂದೇನೂ ಇಲ್ಲ. ಪುರುಷರ ಉತ್ತಮ ಕೆಲಸಗಳೂ ಆಕೆಯನ್ನು ಪ್ರೇರೇಪಿಸಬಹುದು. ಅದು ನಾವು ಕೆಲಸ ಮಾಡುವ ಕ್ಷೇತ್ರದ ಮೇಲೆ ಅವಲಂಬಿತವಾಗಿರುತ್ತದೆ’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !