ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳೆ ಪ್ರವೇಶಕ್ಕೆ ವಿರೋಧಿಸುವ ಶಬರಿಮಲೆ ಆಡಳಿತ ಮಂಡಳಿಯನ್ನೇ ಹೊರ ಹಾಕಿ: ಹೊರಟ್ಟಿ

ಮಹಿಳೆಯರ ಪ್ರವೇಶಕ್ಕೆ ವಿರೋಧಿಸುವ
Last Updated 20 ಅಕ್ಟೋಬರ್ 2018, 9:54 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಮಹಿಳೆಯರಿಗೆ ಪ್ರವೇಶ ನೀಡಲು ವಿರೋಧ ವ್ಯಕ್ತಪಡಿಸಿದರೆ, ಶಬರಿ ಮಲೆ ಆಡಳಿತ ಮಂಡಳಿಯನ್ನೇ ಹೊರ ಹಾಕಬೇಕು’ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ಶಬರಿ ಮಲೆ ದೇವಸ್ಥಾನಕ್ಕೆ ಮಹಿಳೆಯರಿಗೆ ಪ್ರವೇಶ ನೀಡಲು ಆಡಳಿತ ಮಂಡಳಿಯೇ ವಿರೋಧ ವ್ಯಕ್ತಪಡಿಸುತ್ತಿರುವ ಬಗ್ಗೆ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಶನಿವಾರ ಪ್ರತಿಕ್ರಿಯೆ ನೀಡಿದ ಅವರು, ‘ಮಹಿಳೆ ಮತ್ತು ಪುರುಷ ಸಮಾನರಾಗಿದ್ದು, ಯಾವುದೇ ವಿಷಯದಲ್ಲಿ ತಾರತಮ್ಯ ಮಾಡಬಾರದು. ಗುಡಿ ಪೂಜಾರಿಯ ಸ್ವತ್ತಲ್ಲ’ ಎಂದರು.

‘ಮಹದಾಯಿ ವಿಷಯದಲ್ಲಿ ಈ ಹಿಂದೆ ವಿಳಂಬ ಧೋರಣೆ ಅನುಸರಿಸಲಾಗಿದೆ. ಆದರೆ ಈಗ ಆ ರೀತಿ ಆಗಲು ಬಿಡುವುದಿಲ್ಲ. ಈ ವಿಷಯದ ಬಗ್ಗೆ ಮುಖ್ಯಮಂತ್ರಿ ಅವರ ಗಮನ ಸೆಳೆಯಲಾಗುವುದು. ಇದೇ 23ರಂದು ಕುಮಾರಸ್ವಾಮಿ ಕಿತ್ತೂರಿಗೆ ಬರುತ್ತಾರೆ, ಆಗ ಸಹ ಈ ವಿಷಯ ಪ್ರಸ್ತಾಪಿಸಲಾಗುತ್ತದೆ. ನಮಗೆ ಹಂಚಿಕೆಯಾಗಿರುವ ನೀರನ್ನು ಸಮಪರ್ಕವಾಗಿ ಬಳಸಿಕೊಳ್ಳಲು ಅಗತ್ಯ ಕಾಮಗಾರಿ ಕೈಗೊಳ್ಳಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT