ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಘಾತ: ಮಹಿಳೆ ಸಾವು

Last Updated 7 ಫೆಬ್ರುವರಿ 2019, 19:28 IST
ಅಕ್ಷರ ಗಾತ್ರ

ಚಿಂತಾಮಣಿ: ಚಿಂತಾಮಣಿ ಬೆಂಗಳೂರು ರಸ್ತೆಯ ಚಿನ್ನಸಂದ್ರದ ಬಳಿ ಗುರುವಾರ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ಹಳ್ಳಕ್ಕೆ ಬಿದ್ದಿದ್ದರಿಂದ ಮಹಿಳೆಯೊಬ್ಬರು ಮೃತಪಟ್ಟು, ಮೂರು ಜನ ಗಾಯಗೊಂಡಿದ್ದಾರೆ.

ಕಾರಿನಲ್ಲಿದ್ದ ಬೆಂಗಳೂರಿನ ಎಂ.ಎಸ್.ಪಾಳ್ಯದ ಲಲಿತಮ್ಮ ಸ್ಥಳದಲ್ಲೇ ಮೃತಟ್ಟಿದ್ದಾರೆ. ಚಾಲಕ ಸುಧಾಕರ್, ನಂಜಣ್ಣ, ಪದ್ಮಾವತಿ ಗಾಯಗೊಂಡಿದ್ದಾರೆ.

ಚಿಂತಾಮಣಿಯಲ್ಲಿ ನಡೆಯುತ್ತಿದ್ದ ಮದುವೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿನಿಂದ ಬರುತ್ತಿದ್ದರು.

ಗಾಯಾಳುಗಳಿಗೆ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕಳುಹಿಸಲಾಗಿದೆ. ಸಂಬಂಧಿ ಶೇಷಾದ್ರಿ ಎಂಬುವವರು ಗ್ರಾಮಾಂತರ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT