ಕೆಎಲ್‌ಇ ನರ್ಸಿಂಗ್ ಸಂಸ್ಥೆಯಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

7

ಕೆಎಲ್‌ಇ ನರ್ಸಿಂಗ್ ಸಂಸ್ಥೆಯಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Published:
Updated:

ಹುಬ್ಬಳ್ಳಿ: ಇಲ್ಲಿನ ಕೆಎಲ್‌ಇ ನರ್ಸಿಂಗ್ ಸಂಸ್ಥೆಯಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಗುರುವಾರ ಆಚರಿಸಲಾಯಿತು.

ವೈದ್ಯರೆಲ್ಲ ಒಂದು ಕಡೆ ಸೇರಿ ಮಾನಸಿಕ ಕಾಯಿಲೆಗಳಿಗೆ ಪರಿಹಾರ ಕಂಡುಕೊಳ್ಳುವ ಬಗ್ಗೆ ಚರ್ಚಿಸಲು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ವೇದಿಕೆ ಕಲ್ಪಿಸಿಕೊಡುತ್ತದೆ. ಬಾಲ್ಯದಲ್ಲಿ ಕಂಡು ಬರುವ ಮಾನಸಿಕ ಕಾಯಿಲೆಗಳನ್ನು ಆರಂಭದಲ್ಲಿಯೇ ಗುರುತಿಸಿ ಅದನ್ನು ಗುಣಪಡಿಸಬೇಕು. ಮಾನಸಿಕ ಆರೋಗ್ಯದ ಬಗ್ಗೆ ಉತ್ತಮ ತಿಳಿವಳಿಕೆ ಹೊಂದಬೇಕು ಎಂದರು. ‘ಮಾನಸಿಕ ಆರೋಗ್ಯ ಹಾಗೂ ಕೆಲಸದ ಸ್ಥಳ’ ವಿಷಯದ ಬಗ್ಗೆಯೂ ಅವರು ಮಾತನಾಡಿದರು.

ಕಿಮ್ಸ್‌ನ ಮಾನಸಿಕ ಆರೋಗ್ಯ ವಿಭಾಗದ ಸಹ ಪ್ರಾಧ್ಯಾಪಕ ಡಾ. ಸಿ. ಅರುಣ್ ಕುಮಾರ್ ಮಾತನಾಡಿ, ಜನ ಸಾಮಾನ್ಯರಲ್ಲಿ ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಮಹತ್ವ ದಿನ ಇದಾಗಿದೆ. ‘ಬದಲಾಗುತ್ತಿರುವ ಪ್ರಪಂಚದಲ್ಲಿ ಯುವ ಜನರ ಮಾನಸಿಕ ಆರೋಗ್ಯ’ ಈ ಬಾರಿಯ ವಿಶ್ವ ಆರೋಗ್ಯ ದಿನದ ಘೋಷವಾಕ್ಯವಾಗಿದೆ. ಯುವಕರ ಮೇಲೆ ಹೆಚ್ಚು ಗಮನ ಕೇಂದ್ರೀಕರಿಸಲಾಗಿದೆ. ಬಾಲ್ಯದಲ್ಲಿ ಮಾನಸಿಕ ಆರೋಗ್ಯವಿದ್ದರೆ, ಹರಯದಲ್ಲಿ ಸಮಸ್ಯೆಯಾಗದು ಎಂದು ಅಭಿಪ್ರಾಯಪಟ್ಟರು.

ಸಮುದಾಯ ಆರೋಗ್ಯ ವಿಭಾಗದ ಮುಖ್ಯಸ್ಥೆ ಮೀನಾಕ್ಷಿ ಆರ್‌ ದೇವಾಂಗಮಠ ಅಧ್ಯಕ್ಷತೆ ವಹಿಸಿದ್ದರು. ಡಾ. ತೇಜಸ್ವಿಸಿ ಅತಿಥಿಗಳನ್ನು ಪರಿಚಯಿಸಿದರು. ಆಯೇಷಾ ಶೇಖ್ ಮತ್ತು ವಿನಿತಾ ದೇಸಾಯಿ ವಂದಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !