ಷರತ್ತು ರಹಿತ ಸಾಲ ಮನ್ನಾಕ್ಕೆ ಆಗ್ರಹ

7

ಷರತ್ತು ರಹಿತ ಸಾಲ ಮನ್ನಾಕ್ಕೆ ಆಗ್ರಹ

Published:
Updated:

ಯಲಹಂಕ: ಸರ್ಕಾರ ಯಾವುದೇ ಷರತ್ತುಗಳನ್ನು ವಿಧಿಸದೆ ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು ಎಂದು ಪ್ರೊ.ನಂಜುಂಡಸ್ವಾಮಿ ಸ್ಥಾಪಿತ ರಾಜ್ಯ ರೈತಸಂಘದ ಗೌರವಾಧ್ಯಕ್ಷ ವಿ.ಆರ್.ನಾರಾಯಣರೆಡ್ಡಿ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.

‘ಸಾಲಮನ್ನಾ ಮಾಡಲು ವರ್ಷಗಟ್ಟಲೆ ಕಾಲಾವಕಾಶ ತೆಗೆದುಕೊಳ್ಳುತ್ತಿರುವುದರಿಂದ ರೈತರು ಅತ್ತ ಸಾಯಲೂ, ಇತ್ತ ಬದುಕಲೂ ಆಗದೆ ತ್ರಿಶಂಕು ಸ್ಥಿತಿ ಎದುರಿಸುತ್ತಿದ್ದಾರೆ. ಆದ್ದರಿಂದ ಒಂದೇ ಬಾರಿ ಸಾಲಮನ್ನಾ ಮಾಡಬೇಕು’ ಎಂದರು.

‘ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ರೈತರು ಪಡೆದ ಸಾಲಮನ್ನಾ ಆಗದೆ, ಹೊಸದಾಗಿ ಸಾಲವೂ ಸಿಗುತಿಲ್ಲ. ಇದರಿಂದ ರೈತರ ಸ್ಥಿತಿ ಅತಂತ್ರವಾಗಿದ್ದು, ಬೇರೆ ಬೆಳೆಗಳನ್ನು ಬೆಳೆಯಲೂ ಆಗದೆ ಸಂಕಷ್ಟದಲ್ಲಿದ್ದಾರೆ ಎಂದರು. ರೈತರ ಹಲವಾರು ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಲು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಫೆ. 13ರಂದು ರೈತರ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಸಂಘದ ರಾಜ್ಯ ಕಾರ್ಯಾಧ್ಯಕ್ಷ ಮಂಜೇಗೌಡ ಅರಳಾಪುರ ಮಾತನಾಡಿ, ‘ಪ್ರತಿ ತಾಲ್ಲೂಕುಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆದು, ರೈತರು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ನೀಡಬೇಕು. ರಾಜ್ಯದಾದ್ಯಂತ ವರ್ಷಕ್ಕೆ ಎರಡು ಬಾರಿ ಕೆರೆಗಳನ್ನು ತುಂಬಿಸುವ ಕಾರ್ಯಕ್ರಮ ಜಾರಿಗೊಳಿಸಬೇಕು’ ಎಂದು ಆಗ್ರಹಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !