ಯಲಹಂಕ: ಬಿಎಂಎಸ್‌ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

ಸೋಮವಾರ, ಜೂನ್ 24, 2019
26 °C

ಯಲಹಂಕ: ಬಿಎಂಎಸ್‌ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

Published:
Updated:
Prajavani

ಯಲಹಂಕ: ‘ಸುಧಾರಿತ ತಂತ್ರಜ್ಞಾನದಿಂದ ಮುಂಬರುವ ದಿನಗಳಲ್ಲಿ 50 ಲಕ್ಷ ಜನರು ಕೆಲಸ ಕಳೆದುಕೊಳ್ಳಲಿದ್ದು,
ಉದ್ಯೋಗಕ್ಕೆ ಹೆಚ್ಚಿನ ಪೈಪೋಟಿ ಸೃಷ್ಟಿಯಾಗಲಿದೆ’ ಎಂದು ಗ್ಲೋಬಲ್‌ ಎಡ್ಜ್‌ ಸಾಫ್ಟ್‌ವೇರ್‌ ಸಂಸ್ಥೆಯ ಉಪಾಧ್ಯಕ್ಷ 
ನಾಗನಗೌಡ ಜಕ್ಕನಗೌಡರ್ ಹೇಳಿದರು. 

ಬಿಎಂಎಸ್ ತಾಂತ್ರಿಕ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಇಂದಿನ ದಿನಮಾನದಲ್ಲಿ ಸವಾಲುಗಳನ್ನು ಮೆಟ್ಟಿನಿಲ್ಲುವ ಛಲ ಬೆಳೆಸಿಕೊಳ್ಳಬೇಕು. ಜಾಗತಿಕ ಮಟ್ಟದ ಅಗತ್ಯತೆಗಳಿಗೆ ಅನುಗುಣವಾಗಿ ವಿಶೇಷ ವೃತ್ತಿ ಕೌಶಲಗಳನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು’ ಎಂದರು. 

ಕಾಲೇಜಿನ ಟ್ರಸ್ಟಿ ದಯಾನಂದ ಪೈ,‘ವಿದ್ಯಾರ್ಥಿಗಳು ದೊಡ್ಡಮಟ್ಟದ ಕನಸುಗಳನ್ನು ಕಾಣುವ ಮೂಲಕ ಸಾಧನೆಯ ಕಡೆಗೆ ಗಮನಹರಿಸಬೇಕು’ ಎಂದರು. 

ಪ್ರಾಂಶುಪಾಲ ಜಿ.ಎನ್.ಮೋಹನ್‌ ಬಾಬು,‘ವಿದ್ಯಾರ್ಥಿಗಳು ವೃತ್ತಿಜೀವನ ಮತ್ತು ಸಮಾಜದಲ್ಲಿ ಎದುರಾಗುವ ಸಮಸ್ಯೆಗಳನ್ನು ಪರಿಹರಿಸುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕು’ ಎಂದು ತಿಳಿಸಿದರು.

ಕಾಗ್ನಿಜೆಂಟ್ ಕಂಪನಿ ವತಿಯಿಂದ ಉತ್ತಮ ವಿದ್ಯಾರ್ಥಿ ಮತ್ತು ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !