ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೋಗೇಶ್ ಗೌಡ ಗೌಡರ್‌ ಕೊಲೆ ಪ್ರಕರಣ : ವಿಚಾರಣೆ ನಡೆಸಲು ಆದೇಶ

Last Updated 18 ಮಾರ್ಚ್ 2019, 20:15 IST
ಅಕ್ಷರ ಗಾತ್ರ

ಬೆಂಗಳೂರು: ‘ಹುಬ್ಬಳ್ಳಿ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೇಶ್ ಗೌಡ ಗೌಡರ್ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ವಿರುದ್ಧ ತನಿಖೆ ನಡೆಸಬೇಕೆಂಬ ಮನವಿ ಬಗ್ಗೆ ಹೊಸದಾಗಿ ವಿಚಾರಣೆ ನಡೆಸಿ’ ಎಂದು ಧಾರವಾಡದ 4ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್‌ಗೆ ಹೈಕೋರ್ಟ್ ನಿರ್ದೇಶಿಸಿದೆ.

ಈ ಕುರಿತು ಮೃತ ಯೋಗೇಶ್ ಗೌಡ ಗೌಡರ್ ಸಹೋದರ ಗುರುನಾಥ ಗೌಡರ್ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಅವರಿದ್ದ ಏಕಸದಸ್ಯ ಪೀಠ ಮಾನ್ಯ ಮಾಡಿದೆ. ಅಲ್ಲದೆ ಅಧೀನ ನ್ಯಾಯಾಲಯ ಈ ಹಿಂದೆ ಅರ್ಜಿ ತಿರಸ್ಕರಿಸಿದ್ದ ಕ್ರಮಕ್ಕೆ ನ್ಯಾಯಪೀಠ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

‘ವಿನಯ್‌ ಕುಲಕರ್ಣಿ ಅವರು ಆರೋಪಿಗಳ ವಿರುದ್ಧ ಸಾಕ್ಷ್ಯ ನುಡಿಯದಂತೆ ಬೆದರಿಸಿದ್ದಾರೆ. ನಿಜವಾದ ಅಪರಾಧಿಗಳನ್ನು ರಕ್ಷಿಸಿದ್ದಾರೆ. ಈ ಕುರಿತು ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಲು ಆದೇಶಿಸಬೇಕು’ ಎಂದು ಗುರುನಾಥ ಗೌಡರ್ ಅಧೀನ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು.

ಆದರೆ, ಅಧೀನ ನ್ಯಾಯಾಲಯ 2019ರ ಜ. 9ರಂದು ಈ ಅರ್ಜಿ ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ‘ಪ್ರಕರಣಕ್ಕೆ ಸಂಬಂಧಿಸಿ ಗೃಹ ಸಚಿವರು, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ, ಪೊಲೀಸ್ ಮಹಾನಿರ್ದೇಶಕರು, ಐಜಿಪಿ ಮತ್ತು ಎಸ್‌.ಪಿ ಅವರಿಗೆ ಮನವಿಪತ್ರ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ’ ಎಂದು ವಿವರಿಸಲಾಗಿತ್ತು.

‘ಭಯವಿಲ್ಲದೆ ಕೋರ್ಟ್‌ಗೆ ಬರಬೇಕು’

‘ಸಾಕ್ಷಿಗಳು ಯಾವುದೇ ಭಯವಿಲ್ಲದೇ ಕೊರ್ಟ್‌ಗೆ ಬರುವಂತಾಗಬೇಕು. ಈ ದಿಸೆಯಲ್ಲಿ ವಿಚಾರಣಾ ನ್ಯಾಯಾಲಯಗಳು ಹೆಚ್ಚಿನ ಗಮನ ವಹಿಸಬೇಕು’ ಎಂದು ಆದೇಶದಲ್ಲಿ ತಿಳಿಸಲಾಗಿದೆ.

‘ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಅರ್ಜಿ ಸಲ್ಲಿಸಿದರೆ ಅಂತಹ ಅರ್ಜಿಗಳನ್ನು ಗಂಭೀರವಾಗಿ ಪರಿಗಣಿಸಿ ವಿಚಾರಣೆ ನಡೆಸಬೇಕು. ಆದರೆ, ಈ ಪ್ರಕರಣದಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಬೇಸರ ವ್ಯಕ್ತಪಡಿಸಲಾಗಿದೆ.

**

ಸಾಕ್ಷಿಗಳಿಗೆ ರಕ್ಷಣೆ ಒದಗಿಸಲಾಗಿದೆಯೇ ಎಂಬ ಸಂಗತಿಯನ್ನು ಖಚಿತಪಡಿಸಿಕೊಳ್ಳುವುದು ವಿಚಾರಣಾ ನ್ಯಾಯಾಲಯಗಳ ಕರ್ತವ್ಯ.
ಎಚ್‌.ಪಿ.ಸಂದೇಶ್‌, ನ್ಯಾಯಮೂರ್ತಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT