ಶುಕ್ರವಾರ, ಆಗಸ್ಟ್ 7, 2020
23 °C
ಬಂಧಿತರ ಸಂಖ್ಯೆ 5ಕ್ಕೇರಿಕೆ: ಇನ್ನೊಬ್ಬ ಆರೋಪಿಗೆ ಶೋಧ

ಯೋಗೀಶ್ ಕೊಲೆ ಪ್ರಕರಣ: ಮತ್ತೊಬ್ಬ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ತೆಂಕನಿಡಿಯೂರು ಗ್ರಾಮದ ಲಕ್ಷ್ಮೀ ನಗರದಲ್ಲಿ ಜುಲೈ 6ರಂದು ನಡೆದ ಯೋಗೀಶ್ ಕೊಲೆ ಪ್ರಕರಣದ ಆರೋಪಿ ಅನೂಪ್ ಕುಂದರ್ ಎಂಬಾತನನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.

‘ಸಂತೆಕಟ್ಟೆಯಲ್ಲಿ ಆರೋಪಿ ಅವಿತಿರುವ ಖಚಿತ ಮಾಹಿತಿ ಕಲೆಹಾಕಿದ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದು, ಬಂಧನಕ್ಕೆ ಶೋಧ ನಡೆಯುತ್ತಿದೆ’ ಎಂದು ಮಲ್ಪೆ ಠಾಣೆ ಪೊಲೀಸರು ತಿಳಿಸಿದ್ದಾರೆ.

ಯೋಗೀಶ್ ಕೊಲೆ ಪ್ರಕರಣದಲ್ಲಿ ಈಗಾಗಲೇ ರೋಹಿತ್ ಪಿಂಟೊ, ಸುಜಿತ್ ಪಿಂಟೊ, ಪ್ರದೀಪ್, ವಿನಯ್ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.