ಆಫರ್ ಬೇಡವೆಂದ ಜಾರಕಿಹೊಳಿ

7

ಆಫರ್ ಬೇಡವೆಂದ ಜಾರಕಿಹೊಳಿ

Published:
Updated:

ಬೆಳಗಾವಿ: ‘ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಅವರು ನನಗೆ ಕೆಪಿಸಿಸಿ ಅಧ್ಯಕ್ಷನಾಗಲು ಸಲಹೆ ಮಾಡಿದ್ದರು. ಆದರೆ, ಸದ್ಯಕ್ಕೆ ಬೇಡವೆಂದು ಬಿಟ್ಟುಕೊಟ್ಟಿದ್ದೇನೆ. ಐದು ವರ್ಷಗಳ ನಂತರ ಅಧ್ಯಕ್ಷನಾಗಲು ಬಯಸುತ್ತೇನೆ’ ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದರು.

ಇಲ್ಲಿನ ತಮ್ಮ ನಿವಾಸದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷವನ್ನು ರಾಜ್ಯದಾದ್ಯಂತ ಸಂಘಟಿಸುತ್ತೇನೆ. ಇದಕ್ಕಾಗಿ ಅಧ್ಯಕ್ಷ ಸ್ಥಾನದ ಅವಶ್ಯಕತೆ ಇಲ್ಲ’ ಎಂದರು.

‘ಪಕ್ಷದಲ್ಲಿಯೂ ಉತ್ತರ ಕರ್ನಾಟಕದ ಮುಖಂಡರಿಗೆ ಅನ್ಯಾಯವಾಗಿದೆ. ಸುಮಾರು 40 ಜನರು ಶಾಸಕರಾಗಿದ್ದರೆ, ಇವರಲ್ಲಿ ಕೇವಲ 4 ಜನರಿಗೆ ಮಾತ್ರ ಸಚಿವ ಸ್ಥಾನ ಸಿಕ್ಕಿದೆ. ಮುಂದಿನ ದಿನಗಳಲ್ಲಿ ಸರಿಪಡಿಸುವಂತೆ ಪಕ್ಷದ ವರಿಷ್ಠರ ಗಮನಕ್ಕೆ ತರಲಾಗುವುದು’ ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !