ಭಾನುವಾರ, ಆಗಸ್ಟ್ 1, 2021
21 °C

ಆನೆ ದುರಂತವನ್ನು ದ್ವೇಷ ಹರಡಲು ಬಳಸಿಕೊಳ್ಳುತ್ತಿರುವುದು ಬೇಸರದ ಸಂಗತಿ: ಕೇರಳ ಸಿಎಂ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತಿರುವನಂತಪುರ: ಆನೆ ದುರಂತದಲ್ಲಿ ಸಾರ್ವಜನಿಕರ ಕಾಳಜಿ ವ್ಯರ್ಥವಾಗಲು ಬಿಡುವುದಿಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಹೇಳಿದ್ದಾರೆ. ಅಲ್ಲದೆ, ಘಟನೆಯನ್ನು ಕೆಲವರು ದ್ವೇಷ ಹರಡಲು ಬಳಸಿಕೊಳ್ಳುತ್ತಿರುವುದು ಬೇಸರದ ಸಂಗತಿ ಎಂದು ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: ಕೇರಳದಲ್ಲಿ ಆನೆ ಸಾವು: ಅನಾನಸ್ ಪಟಾಕಿ ಮತ್ತು ಟ್ವೀಟಿಗರ ಜಟಾಪಟಿ

‘ಪಾಲಕ್ಕಾಡ್ ಜಿಲ್ಲೆಯಲ್ಲಿ ನಡೆದ ದುರ್ಘಟನೆಯಲ್ಲಿ ಗರ್ಭಿಣಿ ಆನೆಯೊಂದು ಪ್ರಾಣ ಕಳೆದುಕೊಂಡಿದೆ. ನಿಮ್ಮಲ್ಲಿ ಅನೇಕರು ಈ ವಿಚಾರವನ್ನು ನಮಗೆ ತಿಳಿಸಿದ್ದೀರಿ. ನಿಮ್ಮ ಕಾಳಜಿಗಳು ವ್ಯರ್ಥವಾಗುವುದಿಲ್ಲ ಎಂದು ನಿಮಗೆ ಭರವಸೆ ನೀಡುತ್ತೇವೆ. ನ್ಯಾಯ ಮೇಲುಗೈ ಸಾಧಿಸಲಿದೆ ಎಂದು ಅವರು ಹೇಳಿದ್ದಾರೆ.  

ಮೂವರು ಶಂಕಿತರನ್ನು ಗುರಿಯಾಗಿರಿಸಿಕೊಂಡು ತನಿಖೆ ನಡೆಯುತ್ತಿದೆ. ಪೊಲೀಸ್ ಮತ್ತು ಅರಣ್ಯ ಇಲಾಖೆ ಜಂಟಿಯಾಗಿ ಘಟನೆಯ ತನಿಖೆ ನಡೆಸಲಿವೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಜಿಲ್ಲಾ ಅರಣ್ಯ ಅಧಿಕಾರಿ ಇಂದು ಸ್ಥಳಕ್ಕೆ ಭೇಟಿ ನೀಡಿದರು. ಅಪರಾಧಿಗಳಿಗೆ ಶಿಕ್ಷೆ ಕೊಡಿಸಲು ನಾವು ಎಲ್ಲ ರೀತಿಯ ಪ್ರಯತ್ನಗಳನ್ನೂ ಮಾಡುತ್ತೇವೆ ಎಂದು ಭರವಸೆ ನೀಡಿದರು.

ಮಾನವ-ವನ್ಯಜೀವಿ ಸಂಘರ್ಷ ಹೆಚ್ಚುತ್ತಿರುವುದರ ಹಿಂದಿನ ಕಾರಣಗಳನ್ನು ಪರಿಹರಿಸಲು ನಾವು ಪ್ರಯತ್ನಿಸುತ್ತೇವೆ. ಹವಾಮಾನ ಬದಲಾವಣೆಯು ಸ್ಥಳೀಯರು ಮತ್ತು ಪ್ರಾಣಿಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಿರಬಹುದು ಎಂದು ಅವರು ಹೇಳಿದ್ದಾರೆ.  

ಇದನ್ನೂ ಓದಿ: ಕೇರಳ: ಅನುಮಾನಾಸ್ಪದ ಸ್ಥಿತಿಯಲ್ಲಿ ಮೃತಪಟ್ಟಿತ್ತು ಮತ್ತೊಂದು ಆನೆ

ಕೆಲವರು ಈ ದುರಂತವನ್ನು ದ್ವೇಷ ಹರಡಲು ಬಳಸಿಕೊಳ್ಳುತ್ತಿದ್ದಾರೆ. ಇದು ತೀವ್ರ ಬೇಸರ ತರಿಸಿದೆ.  ತಪ್ಪಾದ ವಿವರಣೆಗಳ ಮೇಲೆ ಸುಳ್ಳುಗಳನ್ನು ನಿರ್ಮಿಸಲಾಗುತ್ತಿದೆ. ಸತ್ಯವನ್ನು ಅಳಿಸಲು ಅರ್ಧ ಸತ್ಯಗಳನ್ನು ಬಳಸಿಕೊಳ್ಳಲಾಗುತ್ತಿದೆ. ಘಟನೆಯ ನಿರೂಪಣೆಯಲ್ಲಿ ಕೆಲವರು ಧರ್ಮಾಂಧತೆಯನ್ನು ಸೇರಿಸುತ್ತಿದ್ದಾರೆ. ಈ ಆದ್ಯತೆಗಳೇ ತಪ್ಪಾಗಿವೆ ಎಂದಿದ್ದಾರೆ. 

ಕೇರಳ ಅನ್ಯಾಯದ ವಿರುದ್ಧದ ಆಕ್ರೋಶವನ್ನು ಗೌರವಿಸುವ ಸಮಾಜ. ಅನ್ಯಾಯದ ವಿರುದ್ಧ ಎಲ್ಲ ಕಡೆ, ಎಲ್ಲ ಸಮಯದಲ್ಲೂ, ಎಲ್ಲ ಸ್ವರೂಪದಲ್ಲೂ ಹೋರಾಡುವ ಜನ ನಾವಾಗೋಣ.

ಇದನ್ನೂ ಓದಿ: ತಿರುವನಂತಪುರ | ಅನಾನಸ್‌ ಜತೆ ಪಟಾಕಿ ಸ್ಫೋಟದಿಂದ ಆನೆ ಸಾವು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು