ಭಾನುವಾರ, ಸೆಪ್ಟೆಂಬರ್ 19, 2021
29 °C

ಮೋದಿ- ಅಮಿತ್ ಶಾ ರ‍್ಯಾಲಿಯಲ್ಲಿ ಜನ ಸಾಗರ; ಇದು ಫೋಟೊಶಾಪ್ ಚಿತ್ರ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಪ್ರಧಾನಿ ನರೇಂದ್ರ  ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ರ‍್ಯಾಲಿಗೆ ಸೇರಿದ ಜನ ಸಾಗರ ಎಂಬ ಶೀರ್ಷಿಕೆಯ ಫೋಟೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಮೋದಿ ಮತ್ತು ಅವರ ಹಿತೈಷಿಗಳು ಎಂಬ ಶೀರ್ಷಿಕೆಯೊಂದಿಗೆ We Support Dr Subramanian Swamy ಎಂಬ ಫೇಸ್‍ಬುಕ್ ಪುಟದಲ್ಲಿ ಈ ಚಿತ್ರ ಶೇರ್ ಆಗಿತ್ತು. ಸಾವಿರಕ್ಕೂ ಹೆಚ್ಚು ಮಂದಿ ಈ ಪೋಸ್ಟ್ ಶೇರ್ ಮಾಡಿದ್ದಾರೆ.

ಬಿಜಯ್ ದತ್ತಾ ಎಂಬವರು “In support of Champion of the Earth Narendra Modi jee tsunami start with huge waves Namo again'' ಎಂಬ ಶೀರ್ಷಿಕೆಯೊಂದಿಗೆ ಫೇಸ್‍ಬುಕ್‍ನಲ್ಲಿ ಈ ಫೋಟೊ ಶೇರ್ ಮಾಡಿದ್ದಾರೆ. 

ಆದರೆ ಇದು ಫೋಟೊಶಾಪ್ ಮಾಡಿದ ಚಿತ್ರ ಎಂದು ಆಲ್ಟ್ ನ್ಯೂಸ್ ಫ್ಯಾಕ್ಟ್‌ಚೆಕ್ ಮಾಡಿದೆ.

ಫ್ಯಾಕ್ಟ್‌ಚೆಕ್
ಇದೇ ಫೋಟೊವನ್ನು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ ನಿಜವಾದ ಫೋಟೊ ಸಿಕ್ಕಿದೆ.

ಇದು ಮೋದಿ - ಅಮಿತ್ ಶಾ  ರ‍್ಯಾಲಿ ಚಿತ್ರ ಅಲ್ಲ. 2017 ಡಿಸೆಂಬರ್‌ನಲ್ಲಿ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಅವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಮೋದಿ ಮತ್ತು ಶಾ ವೇದಿಕೆ ಹಂಚಿಕೊಂಡಿದ್ದರು.

ಈ ಕಾರ್ಯಕ್ರಮದ ಚಿತ್ರವನ್ನೇ ಎಡಿಟ್ ಮಾಡಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿ ಬಿಡಲಾಗಿದೆ.

ಆಲ್ಟ್ ನ್ಯೂಸ್ ಈ ಚಿತ್ರ ಫ್ಯಾಕ್ಟ್‌ಚೆಕ್ ಮಾಡಿದ ನಂತರ  We Support Dr Subramanian Swamy ಫೇಸ್‍ಬುಕ್ ಪೇಜ್‍ನಲ್ಲಿ ಈ ಫೋಟೊದ ಶೀರ್ಷಿಕೆಯನ್ನು ಬದಲಾವಣೆ ಮಾಡಲಾಗಿದೆ.  ಈ ಪೋಸ್ಟ್‌ ತಿದ್ದಿರುವುದು ಇಲ್ಲಿ ಕಾಣಬಹುದು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು