ರೈತರ ಆತ್ಮಹತ್ಯೆ ಹೆಚ್ಚುತ್ತಿರುವುದು ಭಂಡ ಸರ್ಕಾರಕ್ಕೆ ಕಾಣುತ್ತಿಲ್ಲ: ಯಡಿಯೂರಪ್ಪ

7

ರೈತರ ಆತ್ಮಹತ್ಯೆ ಹೆಚ್ಚುತ್ತಿರುವುದು ಭಂಡ ಸರ್ಕಾರಕ್ಕೆ ಕಾಣುತ್ತಿಲ್ಲ: ಯಡಿಯೂರಪ್ಪ

Published:
Updated:

ಬೆಂಗಳೂರು: ರಾಜ್ಯಪಾಲರ ಭಾಷಣದಲ್ಲಿ ರೈತರು ನಿರೀಕ್ಷಿಸಿದ್ದ ಸಾಲ ಮನ್ನಾ ಭರವಸೆ ಹುಸಿಯಾಗಿದೆ. ರಾಜ್ಯಪಾಲರ ಭಾಷಣವನ್ನು ಸರ್ಕಾರ ಕೇವಲ ಹೊಗಳಿಸಿಕೊಳ್ಳುವುದಕ್ಕೆ ಸೀಮಿತಗೊಳಿಸಿದೆ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಟೀಕಿಸಿದ್ದಾರೆ.

ಸೋಮವಾರ ವಿಧಾನಸಭೆಯಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಭಾಷಣ ಮಾಡಿದ ಬಳಿಕ ಈ ಕುರಿತು ಯಡಿಯೂರಪ್ಪ ಅವರು ಟ್ವೀಟ್‌ ಮಾಡಿದ್ದಾರೆ.

‘ಸಾಲಮನ್ನಾ ಕುರಿತು ರಾಜ್ಯಪಾಲರ ಭಾಷಣದಲ್ಲಾದರೂ ಭರವಸೆ ಸಿಗಬಹುದೆಂದು ನಾಡಿನ ರೈತರು ಕಾಯುತ್ತಿದ್ದರು. ಆದರೆ, ಅನ್ನದಾತರ ನಿರೀಕ್ಷೆಯನ್ನು ಹುಸಿಗೊಳಿಸಿದ ರಾಜ್ಯ ಸರಕಾರವು ರಾಜ್ಯಪಾಲರ ಭಾಷಣವನ್ನು ಕೇವಲ ಹೊಗಳಿಸಿಕೊಳ್ಳುವುದಕ್ಕೆ ಸೀಮಿತಗೊಳಿಸಿದೆ. ದಿನೇದಿನೇ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವುದು ಈ ಭಂಡ ಸರಕಾರಕ್ಕೆ ಕಾಣುತ್ತಿಲ್ಲ’ ಎಂದು ಟೀಕೆ ಮಾಡಿದ್ದಾರೆ.

ಬೆಂಗಳೂರು ಒನ್‌ನಲ್ಲಿ ಅಕ್ರಮವಾಗಿ ನೋಟು ಬದಲಾವಣೆ: ಉನ್ನತ ತನಿಖೆಗೆ ವಹಿಸಿ
₹500 ಮತ್ತು ₹100 ಮುಖಬೆಲೆಯ ನೋಟುಗಳ ಚಲಾವಣೆಯನ್ನು ನಿಷೇಧಿಸಿದ ಬಳಿಕ ನಡೆದಿರುವ ಅಕ್ರಮ ಬದಲಾವಣೆ ಬಗ್ಗೆ ಮತ್ತೊಂದು ಟ್ವೀಟ್‌ ಮಾಡಿರುವ ಬಿಎಸ್‌ವೈ, ‘ಅಮಾನ್ಯೀಕರಣ ವೇಳೆ ಕಾಂಗ್ರೆಸ್ ನಾಯಕರು ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದು, 'ಬೆಂಗಳೂರು ಒನ್' ಕೇಂದ್ರಗಳಲ್ಲಿ ₹410 ಕೋಟಿ ನಗದನ್ನು ಅಕ್ರಮವಾಗಿ ಬದಲಾಯಿಸಿದ್ದಾರೆ. ಇದಕ್ಕೆ ಸಂಬಂಧಿಸಿದ 235 ಪುಟಗಳ ದಾಖಲೆ ಬಿಡುಗಡೆ ಮಾಡಲಾಗಿದೆ. ಕುಮಾರಸ್ವಾಮಿಯವರು ನಿಜವಾಗಿಯೂ ಭ್ರಷ್ಟಾಚಾರದ ವಿರೋಧಿಯಾಗಿದ್ದರೆ ಪ್ರಕರಣವನ್ನು ಉನ್ನತ ತನಿಖೆಗೆ ವಹಿಸಲಿ’ ಎಂದು ಒತ್ತಾಯಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 7

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !