ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನಂತ್‌ನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆ ಎನ್‌ಕೌಂಟರ್‌ಗೆ ನಾಲ್ವರು ಉಗ್ರರು ಬಲಿ

Last Updated 15 ಮಾರ್ಚ್ 2020, 7:59 IST
ಅಕ್ಷರ ಗಾತ್ರ

ಶ್ರೀನಗರ: ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ನಾಲ್ವರು ಉಗ್ರರನ್ನು ಎನ್‌ಕೌಂಟರ್ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾನುವಾರ ಮುಂಜಾನೆ ಈ ಪ್ರದೇಶವನ್ನು ಸುತ್ತುವರಿದ ಭದ್ರತಾ ಪಡೆಗಳು, ಅಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಮತ್ತು ಲಷ್ಕರ್ ಇ ತೊಯ್ಬಾ ಉಗ್ರರು ಅಡಗಿದ್ದಾರೆ ಎನ್ನುವ ಕುರಿತು ಖಚಿತ ಮಾಹಿತಿ ಪಡೆದ ಮೇರೆಗೆ ಶೋಧ ಕಾರ್ಯಾಚರಣೆ ನಡೆಸಿದರು.

ಉಗ್ರರು ಏಕಾಏಕಿ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ನಂತರ ಶೋಧ ಕಾರ್ಯಾಚರಣೆಯು ಎನ್‌ಕೌಂಟರ್‌ ಆಗಿ ಬದಲಾಗಿದೆ.

ದಾಳಿಯಲ್ಲಿ ದಕ್ಷಿಣ ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಡೈಯಲ್‌ಗಾಮ್ ಪ್ರದೇಶದಲ್ಲಿ ನಾಲ್ವರು ಉಗ್ರರು ಭದ್ರತಾ ಪಡೆ ಗುಂಡೇಟಿಗೆ ಬಲಿಯಾಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT