ಸೋಮವಾರ, ಜೂಲೈ 13, 2020
23 °C

ಇನ್ನೂ 15 ದಿನ ಲಾಕ್‌ಡೌನ್‌ ವಿಸ್ತರಣೆಗೆ ಗೋವಾ ಆಗ್ರಹ

ಪಿಟಿಐ Updated:

ಅಕ್ಷರ ಗಾತ್ರ : | |

ಪಣಜಿ: ದೇಶದಾದ್ಯಂತ ಜೂ.15 ರತನಕ ಲಾಕ್‌ಡೌನ್‌ ಅನ್ನು ವಿಸ್ತರಿಸಬೇಕು ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ಅವರು ಒತ್ತಾಯಿಸಿದ್ದಾರೆ.

ಶುಕ್ರವಾರ ಗೃಹ ಸಚಿವ ಅಮಿತ್‌ ಶಾ ಜೊತೆ ಫೋನ್‌ ಕರೆ ಮೂಲಕ ಮಾತನಾಡಿದ ಅವರು, ಕೋವಿಡ್‌–19ನಿಂದಾಗಿ ದೇಶದಲ್ಲಿ ಸೃಷ್ಟಿಯಾಗಿರುವ ಸಂಕಷ್ಟ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಇದೇ ತಿಂಗಳ 31ರಂದು ಅಂತ್ಯಗೊಳ್ಳಲಿರುವ ಲಾಕ್‌ಡೌನ್‌ ಅನ್ನು ಇನ್ನೂ 15 ದಿನ ವಿಸ್ತರಿಸಬೇಕು ಎಂದು ಕೋರಿದ್ದಾರೆ. ಆದರೆ ನಿಯಮಗಳನ್ನು ಸಡಿಲಗೊಳಿಸಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟಿದ್ದಾರೆ.

‘ಸಾಮಾಜಿಕ ಅಂತರ, ಶೇ. 50 ರಷ್ಟು ಸಿಬ್ಬಂದಿ ಸೇರಿದಂತೆ ಕೆಲವೊಂದು ಷರತ್ತುಗಳೊಂದಿಗೆ ಜಿಮ್‌, ಮಾಲ್‌ ಮತ್ತು ಹೋಟೆಲ್‌ ತೆರಯಲು ಅವಕಾಶ ನೀಡಬೇಕು. ನಾವು ಕೇಂದ್ರದಿಂದ ಲಾಕ್‌ಡೌನ್ ಬಗೆಗಿನ‌ ಹೊಸ ಮಾರ್ಗಸೂಚಿಗಾಗಿ ಕಾಯುತ್ತಿದ್ದೇವೆ. ಅವುಗಳ ಆಧಾರದ ಮೇಲೆ ಲಾಕ್‌ಡೌನ್‌ ನಿಯಮಗಳನ್ನು ಸಡಿಲಗೊಳಿಸಲಿದ್ದೇವೆ ಎಂದು ಅವರು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.