ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಫ್ಗಾನಿಸ್ತಾನದಲ್ಲಿ ಅಪಹರಣಕ್ಕೊಳಗಾಗಿದ್ದ ಭಾರತೀಯರು ತಾಯ್ನಾಡಿಗೆ ವಾಪಸ್

Last Updated 4 ಆಗಸ್ಟ್ 2020, 11:36 IST
ಅಕ್ಷರ ಗಾತ್ರ

ನವದೆಹಲಿ: ‘ಅಫ್ಗಾನಿಸ್ತಾನದಲ್ಲಿ ಅಪಹರಣಕ್ಕೊಳಗಾಗಿದ್ದ ಇಬ್ಬರು ನಾಗರಿಕರುಭಾರತಕ್ಕೆ ಮರಳಿದ್ದಾರೆ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಮಂಗಳವಾರ ತಿಳಿಸಿದೆ.

2018ರ ಮೇ ತಿಂಗಳಲ್ಲಿ ಭಾರತದ ಒಟ್ಟು ಏಳು ಮಂದಿ ಪ್ರಜೆಗಳನ್ನು ಅಪಹರಿಸಲಾಗಿತ್ತು. ಈ ಪೈಕಿ ನಾಲ್ಕು ಮಂದಿ ಈ ಹಿಂದೆಯೇ ತವರಿಗೆ ಹಿಂತಿರುಗಿದ್ದರು. ಕಳೆದ ತಿಂಗಳ 31ರಂದು ಇನ್ನಿಬ್ಬರನ್ನು ಬಿಡುಗಡೆ ಮಾಡಲಾಗಿತ್ತು.

‘ಭಾರತದ ಪ್ರಜೆಗಳನ್ನು ಸುರಕ್ಷಿತವಾಗಿ ಕಳುಹಿಸಿಕೊಟ್ಟ ಅಫ್ಗಾನಿಸ್ತಾನ ಸರ್ಕಾರಕ್ಕೆ ನಾವು ಆಭಾರಿಯಾಗಿದ್ದೇವೆ. ಆ ದೇಶದ ಸಹಕಾರವನ್ನು ಎಂದಿಗೂ ಮರೆಯುವುದಿಲ್ಲ’ ಎಂದು ಸಚಿವಾಲಯವು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT