ಶನಿವಾರ, ಫೆಬ್ರವರಿ 4, 2023
17 °C

ಒಳ ನುಸುಳಲು ಯತ್ನ: ಇಬ್ಬರು ಉಗ್ರರ ಹತ್ಯೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಾಜೋರಿ ಜಿಲ್ಲೆಯ ನೌಶೇರಾ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆಯ ಬಳಿ ಒಳನುಸುಳಲು ಯತ್ನಿಸಿದ ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ಮಂಗಳವಾರ ರಾತ್ರಿ ಹೊಡೆದುರುಳಿಸಿವೆ.

ಉಗ್ರರು ಒಳನುಸುಳಲು ಪ್ರಯತ್ನಿಸುತ್ತಿದ್ದಾಗ ಭಾರತೀಯ ಸೇನೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ನೆಲದಲ್ಲಿ ಅಡಗಿಸಿ ಇಟ್ಟಿದ್ದ ಸ್ಫೋಟಕದ ಮೇಲೆ ಕಾಲಿಟ್ಟದ್ದರಿಂದ ಸಂಭವಿಸಿದ ಸ್ಪೋಟದಲ್ಲಿ ಒಬ್ಬ ಉಗ್ರ ಮೃತಪಟ್ಟಿರಬಹುದು. ಮತ್ತೊಬ್ಬ ಉಗ್ರ ಸೇನೆಯ ಗುಂಡಿಗೆ ಹತನಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದರು.

‘ಉಗ್ರರ ಮೃತದೇಹ ಇನ್ನೂ ಸಿಕ್ಕಿಲ್ಲ. ಮೃತ ಉಗ್ರರ ಗುಂಪಿಗೆ ಸೇರಿದ ಇತರ ಉಗ್ರರು ಅವರ ಶವವನ್ನು ಘಟನಾ ಸ್ಥಳದಿಂದ ತೆಗೆದುಕೊಂಡು ಹೋಗಿರಬಹುದು’ ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

‘ನೌಶೇರಾ ಸೆಕ್ಟರ್‌ ಮತ್ತು ಗಡಿ ನಿಯಂತ್ರಣ ರೇಖೆ ಬಳಿ ಶೋಧ ಕಾರ್ಯಚರಣೆ ಮುಂದುವರೆದಿದೆ’ ಎಂದು ಮೂಲಗಳು ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು