ಶುಕ್ರವಾರ, ಆಗಸ್ಟ್ 7, 2020
24 °C

ಕಾನ್ಪುರ ದಾಳಿ ಘಟನೆ: ಮೂವರು ಪೊಲೀಸ್‌ ಸಿಬ್ಬಂದಿ ಅಮಾನತು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕಾನ್ಪುರ: ‘ನಗರದಲ್ಲಿ ಕೆಲವು ದಿನಗಳ ಹಿಂದೆ ನಡೆದ, ಎಂಟು ಮಂದಿ ಪೊಲೀಸರ ಹತ್ಯೆಯ ಘಟನೆಗೆ ಸಂಬಂಧಿಸಿದಂತೆ, ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಇಬ್ಬರು ಸಬ್‌ ಇನ್‌ಸ್ಪೆಕ್ಟರ್‌ ಹಾಗೂ ಒಬ್ಬ ಕಾನ್‌ಸ್ಟೆಬಲ್‌ ಅವರನ್ನು ಅಮಾನತುಗೊಳಿಸಲಾಗಿದೆ’ ಎಂದು ಎಸ್‌ಎಸ್‌ಪಿ ದಿನೇಶ್ ಕುಮಾರ್‌ ತಿಳಿಸಿದ್ದಾರೆ.

‘ಚೌಬೆಪುರ ಪೊಲೀಸ್‌ ಠಾಣೆಯ ಅಮಾನತುಗೊಂಡಿರುವ ಈ ಸಿಬ್ಬಂದಿ ವಿರುದ್ಧ ಪ್ರಾಥಮಿಕ ತನಿಖೆ ಆರಂಭಿಸಲಾಗಿದೆ. ಇವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗುವುದು. ಘಟನೆಯಲ್ಲಿ ಇವರ ಕೈವಾಡವಿರುವುದು ಸಾಬೀತಾದರೆ ಕಠಿಣ ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ’ ಎಂದು ಅವರು ಹೇಳಿದ್ದಾರೆ.

ಬಹುಮಾನ ಹೆಚ್ಚಳ: ಎಂಟು ಮಂದಿ ಪೊಲೀಸರ ಹತ್ಯೆಯ ಆರೋಪಿ ವಿಕಾಸ್‌ ದುಬೆಯನ್ನು ಬಂಧಿಸಿದವರಿಗೆ ನೀಡುವ ಬಹುಮಾನದ ಮೊತ್ತವನ್ನು ₹2.50 ಲಕ್ಷಕ್ಕೆ ಹೆಚ್ಚಿಸಲಾಗಿದೆ ಎಂದು ಡಿಜಿಪಿ ಎಚ್‌.ಸಿ. ಅವಸ್ಥಿ ಹೇಳಿದ್ದಾರೆ. ಈ ಹಿಂದೆ ₹1ಲಕ್ಷ ಬಹುಮಾನ ಘೋಷಿಸಲಾಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು