ಶುಕ್ರವಾರ, ಆಗಸ್ಟ್ 7, 2020
28 °C

ಒಡಿಶಾ | ಎನ್‌ಕೌಂಟರ್‌ನಲ್ಲಿ ನಾಲ್ಕು ಮಾವೋವಾದಿಗಳ ಹತ್ಯೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಭುವನೇಶ್ವರ: ಒಡಿಶಾದ ಕಂದಮಾಲ್ ಜಿಲ್ಲೆಯಲ್ಲಿ ಭದ್ರತಾ ಪಡೆ ಮತ್ತು ಮಾವೋವಾದಿಗಳ ನಡುವೆ ಭಾನುವಾರ ನಡೆದ ಎನೌಕೌಂಟರ್‌ನಲ್ಲಿ 4 ಮಾವೋವಾದಿಗಳು ಮೃತಪಟ್ಟಿದ್ದಾರೆ.

ಪೊಲೀಸರಿಗೆ ದೊರೆತ ಮಾಹಿತಿ ಮೇರೆಗೆ ವಿಶೇಷ ಕಾರ್ಯಾಚರಣೆ ಗುಂಪು ಸಿಬ್ಬಂದಿ ಮತ್ತು ಜಿಲ್ಲಾ ಸ್ವಯಂಸೇವಕ ಪಡೆ, ಕಂಧಮಾಲ್‌ ಜಿಲ್ಲೆಯಲ್ಲಿ ತುಮುಡಿಬಂಧ ಕಾಡಿನಲ್ಲಿ ಭಾನುವಾರ ಬೆಳಿಗ್ಗೆ ಶೋಧ ಕಾರ್ಯಚರಣೆ ನಡೆಸಿದೆ. ಈ ವೇಳೆ ಮಾವೋವಾದಿಗಳು ದಾಳಿ ನಡೆಸಿದ್ದರಿಂದ ಭದ್ರತಾ ಪಡೆಗಳು ಪ್ರತಿ ದಾಳಿ ನಡೆಸಿದವು ಎಂದು ಹಿರಿಯ ‍ಪೊಲೀಸ್‌ ಅಧಿಕಾರಿ ಅಭಯ್‌ ಅವರು ತಿಳಿಸಿದರು.

ಸ್ಥಳದಿಂದ ಭಾರಿ ಪ್ರಮಾಣದಲ್ಲಿ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದ್ದು, ಮೃತ ಮಾವೋವಾದಿಗಳು ನಿಷೇಧಿತ ಸಿಪಿಐ ಸಂಘಟನೆಯ ಬನ್ಸಾಧರ-ನಾಗಾವಳಿ-ಘುಮುಸರ್ ವಿಭಾಗದ ಸದಸ್ಯರೆಂದು ಶಂಕಿಸಲಾಗಿದೆ ಎಂದು ಅವರು ಹೇಳಿದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು