ಬುಧವಾರ, ಆಗಸ್ಟ್ 5, 2020
22 °C
ಸಚಿವರ ಗುಂಪಿಗೆ ಮಾಹಿತಿ ನೀಡಿದ ಅಧಿಕಾರಿಗಳು

ಕೋವಿಡ್‌–19: ಸಕ್ರಿಯ ಪ್ರಕರಣಗಳಲ್ಲಿ 8 ರಾಜ್ಯಗಳ ಪಾಲು ಶೇ 90

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ದೇಶದಲ್ಲಿ ಕಂಡುಬಂದಿರುವ ಕೋವಿಡ್‌–19 ಸಕ್ರಿಯ ಪ್ರಕರಣಗಳ ಪೈಕಿ ಶೇ 90ರಷ್ಟು ಪ್ರಕರಣಗಳು 8 ರಾಜ್ಯಗಳಲ್ಲಿ ವರದಿಯಾಗಿವೆ ಎಂದು ಕೋವಿಡ್‌–19ಕ್ಕೆ ಸಂಬಂಧಿಸಿದ ಸಚಿವರ ಗುಂಪಿಗೆ ಗುರುವಾರ ಮಾಹಿತಿ ನೀಡಲಾಗಿದೆ.

ಒಟ್ಟು ಪ್ರಕರಣಗಳ ಪೈಕಿ ಮಹಾರಾಷ್ಟ್ರ, ತಮಿಳುನಾಡು, ದೆಹಲಿ, ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ, ಉತ್ತರ ಪ್ರದೇಶ ಹಾಗೂ ಗುಜರಾತ್‌ನಲ್ಲಿ ಶೇ 90ರಷ್ಟು ಸಕ್ರಿಯ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ನೇತೃತ್ವದಲ್ಲಿ ನಡೆದ ಸಚಿವರ ಗುಂಪಿನ 18ನೇ ಸಭೆಗೆ ಮಾಹಿತಿ ನೀಡಲಾಗಿದೆ.

ಕೊರೊನಾ ಸೋಂಕಿನಿಂದಾದ ಸಾವುಗಳಲ್ಲಿ ಮಹಾರಾಷ್ಟ್ರ, ದೆಹಲಿ, ಗುಜರಾತ್‌, ತಮಿಳುನಾಡು, ಉತ್ತರ ಪ್ರದೇಶ ಹಾಗೂ ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ಮರಣ ಪ್ರಮಾಣ ಶೇ 86 ಇದೆ. ಜಿಲ್ಲಾವಾರು ಪ್ರಮಾಣ ಪರಿಗಣಿಸಿದರೆ, 32 ಜಿಲ್ಲೆಗಳಲ್ಲಿನ ಸಾವಿನ ಪ್ರಮಾಣವೇ ಶೇ 80ರಷ್ಟಾಗಲಿದೆ ಎಂದು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರದ ನಿರ್ದೇಶಕ ಡಾ.ಸುರ್ಜೀತ್‌ ಸಿಂಗ್‌ ಅವರು ಸಭೆಗೆ ಮಾಹಿತಿ ನೀಡಿದರು.

 ಮುಖ್ಯಾಂಶಗಳು

21.3 ಕೋಟಿ -ಎನ್‌95 ಮಾಸ್ಕ್‌ ವಿತರಣೆ

1.2 ಕೋಟಿ - ಪಿಪಿಇ ಕಿಟ್‌ ವಿತರಣೆ

6.12 ಕೋಟಿ -ಹೈಡ್ರಾಕ್ಸಿಕ್ಲೋರೊಕ್ವಿನ್‌ ಮಾತ್ರೆ ವಿತರಣೆ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು