ಮಂಗಳವಾರ, ಆಗಸ್ಟ್ 3, 2021
26 °C

ಗೋವಾ: ಶುಕ್ರವಾರದಿಂದ 3 ದಿನಗಳ ಲಾಕ್‌ಡೌನ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಪಣಜಿ: ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಗೋವಾದಲ್ಲಿ ಶುಕ್ರವಾರದಿಂದ ಮೂರು ದಿನಗಳ ಕಾಲ ಕಟ್ಟುನಿಟ್ಟಿನ ಲಾಕ್‌ಡೌನ್‌ ಜಾರಿಯಲ್ಲಿರುತ್ತದೆ ಎಂದು ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ಬುಧವಾರ ತಿಳಿಸಿದ್ದಾರೆ.

ಇದರೊಂದಿಗೆ ಆಗಸ್ಟ್‌ 10ರವರೆಗೆ ರಾತ್ರಿ 8ರಿಂದ ಬೆಳಿಗ್ಗೆ 6ರವರೆಗೆ ಜನತಾ ಕ‌ರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಅವರು ಹೇಳಿದ್ದಾರೆ. 

ಅಗತ್ಯ ಸೇವೆ ಮತ್ತು ವೈದ್ಯಕೀಯ ತುರ್ತು ಇರುವವರಿಗೆ ಮಾತ್ರ ಸಂಚಾರಕ್ಕೆ ಅವಕಾಶವಿರುತ್ತದೆ. ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿದ್ದು ಜನ ಮಾಸ್ಕ್‌ ಧರಿಸುತ್ತಿಲ್ಲ. ಜತೆಗೆ ಅಂತರ ಕಾಯ್ದುಕೊಳ್ಳುವ ನಿಯಮನ್ನು ಪಾಲಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. 

ಮಾಸ್ಕ್‌ ಧರಿಸದ ಕಾರಣ ಈವರೆಗೆ 40 ಸಾವಿರಕ್ಕೂ ಅಧಿಕ ಮಂದಿಗೆ ದಂಡ ವಿಧಿಸಲಾಗಿದೆ. ಹಾಗಾಗಿ ಕಟ್ಟುನಿಟ್ಟಿನ ಕ್ರಮವನ್ನು ಜಾರಿಗೊಳಿಸಲಾಗುವುದು. ಮಳೆಗಾಲವಾದ್ದರಿಂದ ಜುಲೈ‌ 20ರೊಳಗೆ ಪ್ರಕರಣಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು