ಶನಿವಾರ, ಆಗಸ್ಟ್ 8, 2020
23 °C

ವರವರ ರಾವ್ ಆಸ್ಪತ್ರೆಗೆ ದಾಖಲು

ಪಿಟಿಐ Updated:

ಅಕ್ಷರ ಗಾತ್ರ : | |

ವರವರ ರಾವ್

ಮುಂಬೈ: ಕವಿ ಮತ್ತು ಸಾಮಾಜಿಕ ಕಾರ್ಯಕರ್ತ ವರವರ ರಾವ್‌ ಅವರನ್ನು ಮುಂಬೈನ ಜೆ.ಜೆ. ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ರಾವ್ ಅವರ ಪರ ವಕೀಲರು ಮಂಗಳವಾರ ತಿಳಿಸಿದ್ದಾರೆ.

‘ರಾವ್ ಅವರಿಗೆ ತಲೆಸುತ್ತು ಬಂದಿದ್ದರಿಂದ ಅವರನ್ನು ಸೋಮವಾರ ರಾತ್ರಿ ಜೆ.ಜೆ. ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯಲ್ಲಿ ಅವರಿಗೆ ಕೆಲ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ’ ಎಂದು ರಾವ್ ಪರ ವಕೀಲ ಆರ್. ಸತ್ಯನಾರಾಯಣ ಅಯ್ಯರ್ ಮಾಹಿತಿ ನೀಡಿದ್ದಾರೆ.

ತಮ್ಮ ಆರೋಗ್ಯ ಕ್ಷೀಣಿಸುತ್ತಿದ್ದು, ಚಿಕಿತ್ಸೆಗಾಗಿ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗೆ ದಾಖಲಿಸಲು ಜೈಲಿನ ಅಧಿಕಾರಿಗಳಿಗೆ ಕೋರ್ಟ್ ನಿರ್ದೇಶನ ನೀಡಬೇಕು ಹಾಗೂ ಅನಾರೋಗ್ಯಕ್ಕೆ ಸಂಬಂಧಿಸಿದ ವೈದ್ಯಕೀಯ ದಾಖಲೆಗಳನ್ನು ಸಲ್ಲಿಸಿ, ತಮಗೆ ತಾತ್ಕಾಲಿಕವಾಗಿ ಜಾಮೀನು ನೀಡಬೇಕೆಂದು ಕೋರಿ ರಾವ್ ಅವರು ಬಾಂಬೆ ಹೈಕೋರ್ಟ್‌ಗೆ ಸೋಮವಾರ ಎರಡು ಅರ್ಜಿಗಳನ್ನು ಸಲ್ಲಿಸಿದ್ದಾರೆ.

ಎಲ್ಗಾರ್‌ ಪರಿಷತ್‌ ಪ್ರಕರಣದಲ್ಲಿ ಆರೋಪಿಯಾಗಿರುವ ವರವರ ರಾವ್ ಅವರನ್ನು ನವಿ ಮುಂಬೈನ ತಳೋಜಾ ಜೈಲಿನಲ್ಲಿರಿಸಲಾಗಿತ್ತು.

ರಾವ್ ಅವರ ಆರೋಗ್ಯ ತೀವ್ರ ಹದಗೆಡುತ್ತಿದ್ದು, ಅವರನ್ನು ತಕ್ಷಣವೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಬೇಕು ಎಂದು ರಾವ್ ಕುಟುಂಬದ ಸದಸ್ಯರು ಭಾನುವಾರ ಜೈಲಿನ ಅಧಿಕಾರಿಗಳಿಗೆ ಕೋರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು