ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮರನಾಥ ಆರತಿ ದೂರದರ್ಶನದಲ್ಲಿ ನೇರ ಪ್ರಸಾರ

ಪ್ರತಿದಿನ 500 ಮಂದಿಗೆ ಮಾತ್ರವೇ ದರ್ಶನಕ್ಕೆ ಅವಕಾಶ
Last Updated 4 ಜುಲೈ 2020, 15:29 IST
ಅಕ್ಷರ ಗಾತ್ರ

ಶ್ರೀನಗರ:ಈ ವರ್ಷ ಅಮರನಾಥ ‘ಆರತಿ’ ದೂರದರ್ಶನದಲ್ಲಿ ನೇರ ಪ್ರಸಾರವಾಗಲಿದ್ದು, ಪ್ರತಿದಿನ 500 ಯಾತ್ರಾರ್ಥಿಗಳಿಗೆ ಮಾತ್ರವೇ ದರ್ಶನಕ್ಕೆ ಅವಕಾಶ ನೀಡಲು ಜಮ್ಮು, ಕಾಶ್ಮೀರ ಸರ್ಕಾರ ನಿರ್ಧರಿಸಿದೆ.

ಕೊರೊನಾ ಸೋಂಕು ಪ್ರಕರಣ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ. ಯಾತ್ರೆಯುಈ ತಿಂಗಳ 23ರಿಂದ ಆರಂಭವಾಗಲಿದೆ.

ಅಮರನಾಥ ಯಾತ್ರೆಸಂಬಂಧ, ಜಮ್ಮು ಮತ್ತು ಕಾಶ್ಮೀರದ ಮುಖ್ಯ ಕಾರ್ಯದರ್ಶಿ ಬಿವಿಆರ್‌ ಸುಬ್ರಹ್ಮಣ್ಯ ಅವರ ಅಧ್ಯಕ್ಷತೆಯಲ್ಲಿಸುಪ್ರೀಂ ಕೋರ್ಟ್ ರಚಿಸಿದ್ದ ಉಪಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ವಿಪತ್ತು ನಿರ್ವಹಣಾ ಕಾಯ್ದೆಯಡಿ ರಚಿಸಲಾದ ರಾಜ್ಯ ಕಾರ್ಯಕಾರಿ ಸಮಿತಿಯು ಕೋವಿಡ್‌–19ಸಂಬಂಧ ಮಾರ್ಗಸೂಚಿಗಳನ್ನು ಹೊರಡಿಸಿದೆ.ಜಮ್ಮು, ಕಾಶ್ಮಿರಕ್ಕೆ ಪ್ರಯಾಣಿಸುವ ಎಲ್ಲರನ್ನೂ ‌ಆರ್‌ಟಿ–ಪಿಡಿಆರ್‌ ತಪಾಸಣೆಗೆ ಒಳಪಡಿಸಬೇಕು ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT