ಬುಧವಾರ, ಆಗಸ್ಟ್ 12, 2020
23 °C
ಪ್ರತಿದಿನ 500 ಮಂದಿಗೆ ಮಾತ್ರವೇ ದರ್ಶನಕ್ಕೆ ಅವಕಾಶ

ಅಮರನಾಥ ಆರತಿ ದೂರದರ್ಶನದಲ್ಲಿ ನೇರ ಪ್ರಸಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶ್ರೀನಗರ: ಈ ವರ್ಷ ಅಮರನಾಥ ‘ಆರತಿ’  ದೂರದರ್ಶನದಲ್ಲಿ ನೇರ ಪ್ರಸಾರವಾಗಲಿದ್ದು, ಪ್ರತಿದಿನ 500 ಯಾತ್ರಾರ್ಥಿಗಳಿಗೆ ಮಾತ್ರವೇ ದರ್ಶನಕ್ಕೆ ಅವಕಾಶ ನೀಡಲು ಜಮ್ಮು, ಕಾಶ್ಮೀರ ಸರ್ಕಾರ ನಿರ್ಧರಿಸಿದೆ. 

ಕೊರೊನಾ ಸೋಂಕು ಪ್ರಕರಣ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ. ಯಾತ್ರೆಯು ಈ ತಿಂಗಳ 23ರಿಂದ ಆರಂಭವಾಗಲಿದೆ.

ಅಮರನಾಥ ಯಾತ್ರೆ ಸಂಬಂಧ, ಜಮ್ಮು ಮತ್ತು ಕಾಶ್ಮೀರದ ಮುಖ್ಯ ಕಾರ್ಯದರ್ಶಿ ಬಿವಿಆರ್‌ ಸುಬ್ರಹ್ಮಣ್ಯ ಅವರ ಅಧ್ಯಕ್ಷತೆಯಲ್ಲಿ ಸುಪ್ರೀಂ ಕೋರ್ಟ್ ರಚಿಸಿದ್ದ ಉಪಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. 

ವಿಪತ್ತು ನಿರ್ವಹಣಾ ಕಾಯ್ದೆಯಡಿ ರಚಿಸಲಾದ ರಾಜ್ಯ ಕಾರ್ಯಕಾರಿ ಸಮಿತಿಯು ಕೋವಿಡ್‌–19 ಸಂಬಂಧ ಮಾರ್ಗಸೂಚಿಗಳನ್ನು ಹೊರಡಿಸಿದೆ. ಜಮ್ಮು, ಕಾಶ್ಮಿರಕ್ಕೆ ಪ್ರಯಾಣಿಸುವ ಎಲ್ಲರನ್ನೂ ‌ಆರ್‌ಟಿ–ಪಿಡಿಆರ್‌ ತಪಾಸಣೆಗೆ ಒಳಪಡಿಸಬೇಕು ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು